IND vs AUS: ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ 2ನೇ ಭಾರತೀಯ ಬೌಲರ್ ಅಕ್ಷರ್ ಪಟೇಲ್
IND vs AUS, Axar Patel: ನಾಲ್ಕನೇ ಟಿ20 ಪಂದ್ಯದಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 4 ಓವರ್‌ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಪಡೆದರು. ಈ ಮೂರು ವಿಕೆಟ್‌ಗಳೊಂದಿಗೆ ಅಕ್ಷರ್ ಪಟೇಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.
1 / 7
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ರಾಯ್‌ಪುರದಲ್ಲಿ ನಡೆದ 4ನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 20 ರನ್‌ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡಿದೆ.
2 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆಸ್ಟ್ರೇಲಿಯಾಕ್ಕೆ 175 ರನ್ ಟಾರ್ಗೆಟ್ ನೀಡಿತ್ತು. ತಂಡದ ಪರ ಜೈಸ್ವಾಲ್ 37 ರನ್‌ಗಳ ಇನಿಂಗ್ಸ್ ಆಡಿದರೆ, ಗಾಯಕ್‌ವಾಡ್ ಕೂಡ 32 ರನ್ ಗಳಿಸಿದರು. ಈ ಇಬ್ಬರ ಬಳಿಕ ಬಂದ ರಿಂಕು 29 ಎಸೆತಗಳಲ್ಲಿ 46 ರನ್ ಗಳಿಸಿದರೆ, ಜಿತೇಶ್ ಶರ್ಮಾ 19 ಎಸೆತಗಳಲ್ಲಿ 35 ರನ್ ಗಳಿಸಿದರು.
3 / 7
175 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಅಕ್ಷರ್ ಪಟೇಲ್ 3 ವಿಕೆಟ್ ಪಡೆದು ಮಿಂಚಿದಲ್ಲದೆ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡರು.
4 / 7
ನಾಲ್ಕನೇ ಟಿ20 ಪಂದ್ಯದಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 4 ಓವರ್‌ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಪಡೆದರು. ಈ ಮೂರು ವಿಕೆಟ್‌ಗಳೊಂದಿಗೆ ಅಕ್ಷರ್ ಪಟೇಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.
5 / 7
ಅಕ್ಸರ್ ಪಟೇಲ್ ಟಿ20ಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇದುವರೆಗೆ 7 ಪಂದ್ಯಗಳನ್ನಾಡಿದ್ದು, 13 ವಿಕೆಟ್ ಪಡೆದಿದ್ದಾರೆ.
6 / 7
ಪ್ರಸ್ತುತ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಜಸ್ಪ್ರೀತ್ ಬುಮ್ರಾ ಮಾತ್ರ 16 ವಿಕೆಟ್ ಪಡೆದಿದ್ದಾರೆ.
7 / 7
ಇನ್ನು ಆಸ್ಟ್ರೇಲಿಯಾ ಪರ ಅಧಿಕ ವಿಕೆಟ್ ಪಡೆದವರ ಪೈಕಿ ಅಗ್ರಸ್ಥಾನದಲ್ಲಿರುವ ಆಡಮ್ ಝಂಪಾ 12 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.