India vs Australia 3rd Test: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್​ಗೆ 6 ಆಟಗಾರರು ಅಲಭ್ಯ..!

| Updated By: ಝಾಹಿರ್ ಯೂಸುಫ್

Updated on: Feb 25, 2023 | 8:29 PM

India vs Australia 3rd Test: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಕೂಡ ತವರಿಗೆ ಮರಳಿದ್ದಾರೆ.

1 / 9
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಿದ್ದಾರೆ ಎಂಬುದೇ ಅಚ್ಚರಿ. ಅದು ಕೂಡ ಆಸ್ಟ್ರೇಲಿಯಾ ತಂಡದ ಆಟಗಾರರು ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 9
ಅಂದರೆ ದೆಹಲಿ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿದ್ದ 6 ಆಟಗಾರರು ಈಗಾಗಲೇ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಈ ಆಟಗಾರರು ಇಂದೋರ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

3 / 9
1- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈಗಾಗಲೇ ತವರಿಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಟ್ರೇಲಿಯಾಗೆ ಮರಳಿರುವ ಕಮಿನ್ಸ್ ಮರಳುವುದು ಕೂಡ ಅನುಮಾನ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಅವರನ್ನು ಆಯ್ಕೆ ಮಾಡಲಾಗಿದೆ.

4 / 9
2- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ದೆಹಲಿ ಟೆಸ್ಟ್ ಪಂದ್ಯದ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಗಂಭೀರ ಗಾಯವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ವಾರ್ನರ್ ಕೂಡ ತವರಿಗೆ ಮರಳಿದ್ದಾರೆ.

5 / 9
3- ಮ್ಯಾಟ್ ರೆನ್​ಶಾ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮ್ಯಾಟ್ ರೆನ್​ಶಾ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

6 / 9
4- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ದೇಶೀಯ ಕ್ರಿಕೆಟ್​ ಆಡಲು ಅಗರ್ ಕೂಡ ತಂಡವನ್ನು ತೊರೆದಿದ್ದಾರೆ.

7 / 9
5- ಜೋಶ್ ಹ್ಯಾಝಲ್​ವುಡ್: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಕೂಡ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

8 / 9
6- ಟಾಡ್ ಮರ್ಫಿ: ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿರುವ ಯುವ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಮರ್ಫಿ ಕಣಕ್ಕಿಳಿಯುವುದಿಲ್ಲ.

9 / 9
ಪ್ರಸ್ತುತ ಆಸ್ಟ್ರೇಲಿಯಾ ತಂಡ ಹೀಗಿದೆ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್