- Kannada News Photo gallery Cricket photos IND vs AUS: Another player is likely to retire after the BGT series
ಒಂದು ವಿಕೆಟ್ ಪತನ… ಮತ್ತೊಬ್ಬರು ಯಾರು?
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರು ಆಟಗಾರರು ಹೊರಬೀಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದನ್ನು ಪುಷ್ಠೀಕರಿಸುವಂತೆ ಇದೀಗ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇದರ ಬೆನ್ನಲ್ಲೇ ತಂಡದಿಂದ ಹೊರಬೀಳಲಿರುವ ಮತ್ತೋರ್ವ ಆಟಗಾರ ಯಾರು ಎಂಬ ಚರ್ಚೆಗಳು ಶುರುವಾಗಿದೆ.
Updated on: Dec 19, 2024 | 8:24 AM

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ನಡುವೆಯೇ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇಂತಹದೊಂದು ವಿದಾಯವನ್ನು ಈ ಸರಣಿ ಆರಂಭಕ್ಕೂ ಮುನ್ನ ನಿರೀಕ್ಷಿಸಲಾಗಿತ್ತು. ಏಕೆಂದರೆ ಬಾರ್ಡರ್-ಗವಾಸ್ಕರ್ ಸರಣಿ ಶುರುವಾಗುವ ಮುಂಚೆಯೇ ಕೆಲ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಖಡಕ್ ಸೂಚನೆ ದೊರೆತಿತ್ತು.

ನ್ಯೂಝಿಲೆಂಡ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರ ಪ್ರದರ್ಶನದ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಭಾರತ ತಂಡದಿಂದ ಇಬ್ಬರಿಗೆ ಗೇಟ್ ಪಾಸ್ ನೀಡಲು ನಿರ್ಧರಿಸಿತ್ತು.

ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅವರಿಗೆ ನಿರ್ಣಾಯಕ ಎಂದು ಪರಿಗಣಿಸಲಾಗಿತ್ತು. ಏಕೆಂದರೆ ಇವರಲ್ಲಿ ಇಬ್ಬರಿಗೆ ಗೇಟ್ ಪಾಸ್ ಸಿಗುವುದು ಸಹ ಖಚಿತವಾಗಿತ್ತು.

ಇದೀಗ ಇದನ್ನು ಪುಷ್ಠೀಕರಿಸುವಂತೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆದಲ್ಲೇ ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಹೊರಬೀಳಲಿರುವ ಮತ್ತೋರ್ವ ಆಟಗಾರ ಎಂಬ ಚರ್ಚೆಗಳು ಕೂಡ ಶುರುವಾಗಿದೆ.

ಏಕೆಂದರೆ ಬಿಸಿಸಿಐ ಮೂಲಗಳ ಪ್ರಕಾರ, ಬಾರ್ಡರ್-ಗವಾಸ್ಕರ್ ಸರಣಿಯ ಬಳಿಕ ಇಬ್ಬರು ಹಿರಿಯ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ. ಹೀಗೆ ಹೊರಬೀಳುವ ಮುನ್ನವೇ ರವಿಚಂದ್ರನ್ ಅಶ್ವಿನ್ ವಿದಾಯ ಹೇಳಿದ್ದಾರೆ. ಇನ್ನುಳಿದಿರುವುದು ಮೂವರು ಹಿರಿಯ ಆಟಗಾರರು ಮಾತ್ರ.

ಅದರಂತೆ ಇದೀಗ ಹಿರಿಯ ಆಟಗಾರರಾಗಿ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಉಳಿದಿದ್ದಾರೆ. ಇವರಲ್ಲಿ ಅತ್ಯಂತ ಹಿರಿಯ ಆಟಗಾರ 37 ವರ್ಷದ ರೋಹಿತ್ ಶರ್ಮಾ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಬಳಿಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ.




