- Kannada News Photo gallery Cricket photos IND vs AUS: Dinesh Karthik picks his probable XI for 1st Test
India vs Australia 1st Test: ಪ್ರಥಮ ಟೆಸ್ಟ್‌ಗೆ ಪ್ಲೇಯಿಂಗ್ 11 ಪ್ರಕಟಿಸಿದ ದಿನೇಶ್ ಕಾರ್ತಿಕ್
India vs Australia 1st Test: ವಿಕೆಟ್ ಕೀಪರ್ ರಿಷಭ್ ಪಂತ್ ಹೊರಗುಳಿದಿರುವ ಕಾರಣ ಬದಲಿ ಕೀಪರ್ಗೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಕೂಡ ಟೀಮ್ ಇಂಡಿಯಾ ಮುಂದಿದೆ.
Updated on:Feb 08, 2023 | 4:00 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಗುರುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ.

ಏಕೆಂದರೆ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ಹಾಗೂ ರಿಷಭ್ ಪಂತ್ ಕೂಡ ತಂಡದಲ್ಲಿಲ್ಲ. ಹಾಗೆಯೇ ತಂಡದಲ್ಲಿರುವ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ನಡುವೆ ಆರಂಭಿಕನ ಸ್ಥಾನಕ್ಕೆ ಪೈಪೋಟಿ ಇದೆ.

ಇದಲ್ಲದೆ ವಿಕೆಟ್ ಕೀಪರ್ ರಿಷಭ್ ಪಂತ್ ಹೊರಗುಳಿದಿರುವ ಕಾರಣ ಬದಲಿ ಕೀಪರ್ಗೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಕೂಡ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದೇ ಈಗ ಕುತೂಹಲವಾಗಿ ಮಾರ್ಪಟ್ಟಿದೆ.

ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಮೊದಲ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದ್ದಾರೆ. ಆದರೆ ಡಿಕೆ ಆಯ್ಕೆ ಮಾಡಿರುವ ಆಡುವ ಬಳಗದಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಸ್ಥಾನ ಕಲ್ಪಿಸಿಲ್ಲ ಎಂಬುದು ವಿಶೇಷ.

ಇನ್ನು ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್ನಲ್ಲಿ ಹೆಸರಿಸಿದ್ದಾರೆ. ಹಾಗೆಯೇ ಮೂವರು ಸ್ಪಿನ್ ಆಲ್ರೌಂಡರ್ಗಳನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ದಿನೇಶ್ ಕಾರ್ತಿಕ್ ಆಯ್ಕೆ ಮಾಡಿರುವ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
Published On - 3:59 pm, Wed, 8 February 23




