India vs Australia 1st Test: ಪ್ರಥಮ ಟೆಸ್ಟ್​ಗೆ ಪ್ಲೇಯಿಂಗ್ 11 ಪ್ರಕಟಿಸಿದ ದಿನೇಶ್ ಕಾರ್ತಿಕ್

| Updated By: ಝಾಹಿರ್ ಯೂಸುಫ್

Updated on: Feb 08, 2023 | 4:00 PM

India vs Australia 1st Test: ವಿಕೆಟ್ ಕೀಪರ್ ರಿಷಭ್ ಪಂತ್ ಹೊರಗುಳಿದಿರುವ ಕಾರಣ ಬದಲಿ ಕೀಪರ್​ಗೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಕೂಡ ಟೀಮ್ ಇಂಡಿಯಾ ಮುಂದಿದೆ.

1 / 7
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಗುರುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ.

2 / 7
ಏಕೆಂದರೆ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಜಸ್​ಪ್ರೀತ್ ಬುಮ್ರಾ ಹಾಗೂ ರಿಷಭ್ ಪಂತ್ ಕೂಡ ತಂಡದಲ್ಲಿಲ್ಲ. ಹಾಗೆಯೇ ತಂಡದಲ್ಲಿರುವ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ನಡುವೆ ಆರಂಭಿಕನ ಸ್ಥಾನಕ್ಕೆ ಪೈಪೋಟಿ ಇದೆ.

3 / 7
ಇದಲ್ಲದೆ ವಿಕೆಟ್ ಕೀಪರ್ ರಿಷಭ್ ಪಂತ್ ಹೊರಗುಳಿದಿರುವ ಕಾರಣ ಬದಲಿ ಕೀಪರ್​ಗೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಕೂಡ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದೇ ಈಗ ಕುತೂಹಲವಾಗಿ ಮಾರ್ಪಟ್ಟಿದೆ.

4 / 7
ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಮೊದಲ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ. ಆದರೆ ಡಿಕೆ ಆಯ್ಕೆ ಮಾಡಿರುವ ಆಡುವ ಬಳಗದಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಸ್ಥಾನ ಕಲ್ಪಿಸಿಲ್ಲ ಎಂಬುದು ವಿಶೇಷ.

5 / 7
ಇನ್ನು ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಹೆಸರಿಸಿದ್ದಾರೆ. ಹಾಗೆಯೇ ಮೂವರು ಸ್ಪಿನ್​ ಆಲ್​ರೌಂಡರ್​ಗಳನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ದಿನೇಶ್ ಕಾರ್ತಿಕ್ ಆಯ್ಕೆ ಮಾಡಿರುವ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿದೆ...

6 / 7
ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

7 / 7
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

Published On - 3:59 pm, Wed, 8 February 23