IND vs AUS: 66 ಎಸೆತಗಳಲ್ಲಿ ಪಂದ್ಯ ಮುಗಿಸಿ ವಿಶೇಷ ದಾಖಲೆ ಬರೆದ ಆಸ್ಟ್ರೇಲಿಯಾ

India vs Australia 2nd Odi: 118 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ (51) ಹಾಗೂ ಮಿಚೆಲ್ ಮಾರ್ಷ್ (66) ಸ್ಪೋಟಕ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2023 | 7:24 PM

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಟೀಮ್ ಇಂಡಿಯಾ ನೀಡಿದ ಸುಲಭ ಗುರಿಯನ್ನು ಬೆನ್ನತ್ತಿದ ಆಸೀಸ್ ಪಡೆಯು ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಿ ವಿಶೇಷ ದಾಖಲೆಯನ್ನು ಬರೆದಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಹುಸಿಗೊಳಿಸದಂತೆ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್ 5 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾವನ್ನು ಕೇವಲ 117 ರನ್​ಗಳಿಗೆ ಆಲೌಟ್ ಮಾಡಿದರು.

2 / 6
118 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ (51) ಹಾಗೂ ಮಿಚೆಲ್ ಮಾರ್ಷ್ (66) ಸ್ಪೋಟಕ ಆರಂಭ ಒದಗಿಸಿದ್ದರು. ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿದ ಈ ಜೋಡಿ ಭಾರತೀಯ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 11 ಓವರ್​ಗಳಲ್ಲಿ 121 ರನ್​ ಬಾರಿಸಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ಈ ಹತ್ತು ವಿಕೆಟ್​ಗಳ ವಿಜಯದೊಂದಿಗೆ ಆಸ್ಟ್ರೇಲಿಯಾ ತಂಡವು ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿತು. ಹೌದು, ಇದು ಆಸ್ಟ್ರೇಲಿಯಾ ತಂಡ ಏಕದಿನ ಕ್ರಿಕೆಟ್​ನಲ್ಲಿ ಸಾಧಿಸಿದ ಅತ್ಯುತ್ತಮ ಗೆಲುವುಗಳಲ್ಲಿ ಒಂದಾಗಿದೆ. ಇದಕ್ಕೂ ಮುನ್ನ ಆಸೀಸ್ ಪಡೆ ವಿಕೆಟ್ ನಷ್ಟವಿಲ್ಲದೆ ಕಡಿಮೆ ಓವರ್​ನಲ್ಲಿ ಚೇಸ್ ಮಾಡಿದ್ದು ಇಂಗ್ಲೆಂಡ್ ವಿರುದ್ಧ.

4 / 6
2003 ರಲ್ಲಿ ಇಂಗ್ಲೆಂಡ್ ವಿರುದ್ಧ 12.2 ಓವರ್​ಗಳಲ್ಲಿ 118 ರನ್​ ಚೇಸ್ ಮಾಡುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಟೀಮ್ ಇಂಡಿಯಾ ವಿರುದ್ಧ ಕೇವಲ 11 ಓವರ್​ಗಳಲ್ಲಿ ಗೆಲುವು ದಾಖಲಿಸಿದೆ.

5 / 6
ಭಾರತದ ವಿರುದ್ಧ ಕೇವಲ 66 ಎಸೆತಗಳಲ್ಲಿ 121 ರನ್​ ಚಚ್ಚುವ ಮೂಲಕ ಆಸ್ಟ್ರೇಲಿಯಾ ತಂಡವು ವಿಕೆಟ್ ನಷ್ಟವಿಲ್ಲದೆ ಭರ್ಜರಿ ಗೆಲುವು ಸಾಧಿಸಿದೆ. ಇದು ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪಡೆ ವಿಕೆಟ್​ ನಷ್ಟವಿಲ್ಲದೆ ದಾಖಲಿಸಿದ ಅತ್ಯುತ್ತಮ ಗೆಲುವು ಎಂಬುದೇ ವಿಶೇಷ.

6 / 6
Follow us