AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ಟು 2024: ಗಾಬಾ ಟೆಸ್ಟ್​ನಿಂದ 7 ಆಟಗಾರರು ಔಟ್..!

Australia vs India Test: 2021ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಇನ್ನು ಗಾಯದ ಕಾರಣ ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅಶ್ವಿನ್ ಕೂಡ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದ್ದು ಇತಿಹಾಸ.

ಝಾಹಿರ್ ಯೂಸುಫ್
|

Updated on: Dec 14, 2024 | 8:03 AM

Share
ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

1 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು  ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

2 / 5
2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

3 / 5
2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

4 / 5
2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

5 / 5
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ