2021 ಟು 2024: ಗಾಬಾ ಟೆಸ್ಟ್ನಿಂದ 7 ಆಟಗಾರರು ಔಟ್..!
Australia vs India Test: 2021ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಇನ್ನು ಗಾಯದ ಕಾರಣ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅಶ್ವಿನ್ ಕೂಡ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದ್ದು ಇತಿಹಾಸ.
Updated on: Dec 14, 2024 | 8:03 AM

ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್ಗೆ ಆಯ್ಕೆಯಾಗಿಲ್ಲ.



















