- Kannada News Photo gallery Cricket photos IND vs AUS: Gautam Gambhir Confirms India Captain For Perth Test
IND vs AUS: ರೋಹಿತ್ ಶರ್ಮಾ ಅಲಭ್ಯರಾದರೆ, ಇವರೇ ಕ್ಯಾಪ್ಟನ್
Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬಹುದು.
Updated on: Nov 11, 2024 | 12:53 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆಯಿದೆ.

ರೋಹಿತ್ ಶರ್ಮಾ ದಂಪತಿಯು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಪರ್ತ್ ಟೆಸ್ಟ್ ಪಂದ್ಯಕ್ಕೆ ಹಿಟ್ಮ್ಯಾನ್ ಅಲಭ್ಯರಾಗುವ ಸಾಧ್ಯತೆಯಿದೆ. ಇನ್ನು ರೋಹಿತ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಪ್ರಶ್ನೆಗೆ ಖುದ್ದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಉತ್ತರಿಸಿದ್ದಾರೆ. ರೋಹಿತ್ ಶರ್ಮಾ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡದ ನಾಯಕರಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ. ಅದರಂತೆ ರೋಹಿತ್ ಅಲಭ್ಯರಾದರೆ, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸುವುದು ಖಚಿತವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
























