ಶತಕದ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ ಗ್ಲೆನ್ ಮ್ಯಾಕ್ಸ್‌ವೆಲ್

Updated on: Nov 29, 2023 | 11:29 AM

IND vs AUS, Glenn Maxwell: ಭಾರತ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಮ್ಯಾಕ್ಸ್‌ವೆಲ್ ಈ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿ ಒಟ್ಟು ಎಂಟು ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಾಯದಿಂದ ಅಜೇಯ 104 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

1 / 7
ಭಾರತ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

2 / 7
ಮ್ಯಾಕ್ಸ್‌ವೆಲ್ ಈ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿ ಒಟ್ಟು ಎಂಟು ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಾಯದಿಂದ ಅಜೇಯ 104 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

3 / 7
ಈ ಮಾದರಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ನಾಲ್ಕನೇ ಶತಕ ಇದಾಗಿದ್ದು, ಇದರೊಂದಿಗೆ ಪುರುಷರ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 7
47 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಮ್ಯಾಕ್ಸ್‌ವೆಲ್ ಪುರುಷರ ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ ವೇಗದ ಶತಕ ಸಿಡಿಸಿದ ಆರೋನ್ ಫಿಂಚ್ ಮತ್ತು ಜೋಶ್ ಇಂಗ್ಲಿಸ್ ಅವರ ದಾಖಲೆಯನ್ನು ಸರಿಗಟ್ಟಿದರು.

5 / 7
ಕುತೂಹಲಕಾರಿ ಸಂಗತಿಯೆಂದರೆ ಇದು ಆಸ್ಟ್ರೇಲಿಯಾ ಪರ ಮ್ಯಾಕ್ಸ್‌ವೆಲ್ ಅವರ 100 ನೇ ಟಿ20 ಅಂತರರಾಷ್ಟ್ರೀಯ ಪಂದ್ಯವಾಗಿದ್ದು, ತಮ್ಮ ಶತಕದ ಪಂದ್ಯವನ್ನು ರೋಹಿತ್ ಅವರ ಟಿ20 ದಾಖಲೆಯನ್ನು ಸರಿಗಟ್ಟುವ ಮೂಲಕ ಮ್ಯಾಕ್ಸ್‌ವೆಲ್ ಆಚರಿಸಿಕೊಂಡರು.

6 / 7
ಇನ್ನು ಟಿ20ಯಲ್ಲಿ ಅಧಿಕ ಶತಕ ಸಿಡಿಸಿರುವ ಆಟಗಾರರ ಪೈಕಿ ರೋಹಿತ್ ಶರ್ಮಾ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ತಲಾ 4 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಬಾಬರ್ ಆಝಂ ಹಾಗೂ ಸೂರ್ಯಕುಮಾರ್ ಯಾದವ್ ತಲಾ 3 ಶತಕ ಸಿಡಿಸಿ ನಂತರದ ಸ್ಥಾನದಲ್ಲಿದ್ದಾರೆ.

7 / 7
ಮ್ಯಾಕ್ಸ್‌ವೆಲ್ ಪಂದ್ಯದ ಕೊನೆಯ ನಾಲ್ಕು ಎಸೆತಗಳಲ್ಲಿ ಭಾರತದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವಿರುದ್ಧ ಒಂದು ಸಿಕ್ಸರ್ ಮತ್ತು ಸತತ ಮೂರು ಬೌಂಡರಿಗಳನ್ನು ಬಾರಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ, ಆಸ್ಟ್ರೇಲಿಯಾವು ಐದು ಪಂದ್ಯಗಳ ಸರಣಿಯಲ್ಲಿ ಜೀವಂತವಾಗಿರಿಸಿಕೊಂಡಿದೆ.