Jasprit Bumrah: ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಕಾರಣ

|

Updated on: Jan 04, 2025 | 1:24 PM

Jasprit Bumrah Injury Update: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ತಂಡದ ಮೊದಲ ಇನಿಂಗ್ಸ್​ನ ಮೂರನೇ ಸೆಷನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಬೆನ್ನು ನೋವಿನ ಸಮಸ್ಯೆ ಎಂದು ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ತಿಳಿಸಿದ್ದಾರೆ. ಇದೇ ಕಾರಣದಿಂದಾಗಿ ಬುಮ್ರಾ ಅವರು ವೈದ್ಯಕೀಯ ಪರೀಕ್ಷೆಗೂ ಒಳಗಾಗಿದ್ದಾರೆ.

1 / 6
ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ನಡುವೆ ಮೈದಾನ ತೊರೆದಿದ್ದರು. ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್​ಗೆ ಮರಳಿದ್ದರು.

2 / 6
ಇದಾದ ಕೆಲವೇ ಕ್ಷಣಗಳಲ್ಲಿ ಅವರು ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಹೋಗಿದೆಲ್ಲಿಗೆ ಅಥವಾ ಅವರಿಗೆ ಏನಾಗಿದೆ ಎಂಬುದರ ಮಾಹಿತಿ ಮಾತ್ರ ಹೊರಬಿದ್ದಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

3 / 6
ಭೋಜನಾ ವಿರಾಮದ ಬಳಿಕ ಓವರ್​ ಎಸೆದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.

4 / 6
ಇನ್ನು ಡ್ರೆಸ್ಸಿಂಗ್ ರೂಮ್​ಗೆ ತೆರಳಿದ ಬಳಿಕ ಜಸ್​ಪ್ರೀತ್ ಬುಮ್ರಾ ಅವರನ್ನು ಫಿಸಿಯೋ ಪರೀಕ್ಷಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್​ಗಾಗಿ ಸಿಡ್ನಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆಸ್ಪತ್ರೆಯಿಂದ ಜಸ್​ಪ್ರೀತ್ ಬುಮ್ರಾ ಮರಳಿದ್ದು, ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.

5 / 6
ಜಸ್​ಪ್ರೀತ್ ಬುಮ್ರಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಇನ್ನಷ್ಟೇ ಬರಬೇಕಿದ್ದು, ಹೀಗಾಗಿ ಅವರು ಮೂರನೇ ದಿನದಾಟದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಅದರಲ್ಲೂ ಕೊನೆಯ ಇನಿಂಗ್ಸ್​ ವೇಳೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

6 / 6

ಏಕೆಂದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 185 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 181 ರನ್​ಗಳಿಗೆ ಸರ್ವಪತನ ಕಂಡಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಮಾಡುವುದು ಅನಿವಾರ್ಯ ಎನ್ನಬಹುದು.