AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಟೆಸ್ಟ್​ಗೆ ಇಬ್ಬರು ಅಲಭ್ಯ: ಜಸ್​ಪ್ರೀತ್ ಬುಮ್ರಾ ಕ್ಯಾಪ್ಟನ್

India vs Australia Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಇನ್ನುಳಿದ ಎರಡು ಪಂದ್ಯಗಳು ಡಿಸೆಂಬರ್ 26 ಮತ್ತು ಜನವರಿ 3 ರಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on: Nov 18, 2024 | 8:30 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಶುಕ್ರವಾರದಿಂದ (ನ.22) ಆರಂಭವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. 2ನೇ ಮಗುವಿನ ತಂದೆಯಾದ ಖುಷಿಯಲ್ಲಿರುವ ಹಿಟ್​ಮ್ಯಾನ್ ದ್ವಿತೀಯ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

1 / 6
ಇನ್ನು ಪರ್ತ್​ ಟೆಸ್ಟ್​ಗೆ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಕೂಡ ಅಲಭ್ಯರಾಗಿದ್ದಾರೆ. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ವೈದ್ಯಕೀಯ ಪರಿಶೀಲನೆ ಬಳಿಕ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಕೂಡ ಹೊರಗುಳಿಯಲಿದ್ದಾರೆ.

2 / 6
ಅತ್ತ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಲು ಟೀಮ್ ಇಂಡಿಯಾ ವೇಗಿ ಸಜ್ಜಾಗಿದ್ದಾರೆ.

3 / 6
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡುತ್ತಿದೆ. ಅಡಿಲೇಡ್​ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಉಳಿದ 4 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಹಿಟ್​ಮ್ಯಾನ್ ಮುನ್ನಡೆಸುವುದು ಖಚಿತ. ಇನ್ನು ಈ ಸರಣಿಗಾಗಿ ಆಯ್ಕೆಯಾದ ಭಾರತ ತಂಡ ಈ ಕೆಳಗಿನಂತಿದೆ...

4 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

5 / 6
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ: ನವೆಂಬರ್ 22 ರಿಂದ ಮೊದಲ ಟೆಸ್ಟ್ ಪಂದ್ಯ. ಡಿಸೆಂಬರ್ 6 ರಿಂದ ಎರಡನೇ ಟೆಸ್ಟ್ ಪಂದ್ಯ. ಡಿಸೆಂಬರ್ 14 ರಿಂದ ಮೂರನೇ ಟೆಸ್ಟ್ ಪಂದ್ಯ. ಡಿಸೆಂಬರ್ 26 ರಿಂದ ನಾಲ್ಕನೇ ಟೆಸ್ಟ್ ಪಂದ್ಯ. ಜನವರಿ 3 ರಿಂದ ಐದನೇ ಟೆಸ್ಟ್ ಪಂದ್ಯ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ