IND vs AUS: ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್

Updated on: Dec 17, 2024 | 8:25 AM

Australia vs India, 3rd Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಭೋಜನಾ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ.

1 / 7
ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದರು.

2 / 7
ಒಂದೆಡೆ ಟೀಮ್ ಇಂಡಿಯಾ ಬ್ಯಾಟರ್​​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಹುಲ್ ಕ್ರೀಸ್ ಕಚ್ಚಿ ನಿಂತರು. ಈ ಮೂಲಕ 85 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಕೂಡ ಭಾರತದ ಪಾಲಿಗೆ ಆಸರೆಯಾಗಿ ನಿಂತ ರಾಹುಲ್ ಅತ್ಯಾಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು.

3 / 7
ಈ ಮೂಲಕ 138 ಎಸೆತಗಳಲ್ಲಿ 84 ರನ್ ಬಾರಿಸಿ ಶತಕದತ್ತ ದಾಪುಗಾಲಿಟ್ಟಿದ್ದ ರಾಹುಲ್ ಸ್ಪಿನ್ನರ್ ನಾಥನ್ ಲಿಯಾನ್ ಎಸೆತವನ್ನು ಗುರುತಿಸುವಲ್ಲಿ ಎಡವಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿದರು. ಇದರೊಂದಿಗೆ ಟೆಸ್ಟ್​ನಲ್ಲಿ 9ನೇ ಶತಕ ಸಿಡಿಸುವ ಅವಕಾಶವನ್ನು ಕೆಎಲ್ ರಾಹುಲ್ ಕೇವಲ 16 ರನ್​​ಗಳಿಂದ ಕೈ ತಪ್ಪಿಸಿಕೊಂಡರು.

4 / 7
ಇನ್ನು ಕೆಎಲ್ ರಾಹುಲ್ ಅವರ ದಿಟ್ಟ ಹೋರಾಟದ ಫಲವಾಗಿ ಟೀಮ್ ಇಂಡಿಯಾ 49 ಓವರ್​ಗಳ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

5 / 7
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಶತಕ ಬಾರಿಸಿದ್ದರು. ಈ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿದೆ.

6 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

7 / 7
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us