ಕಾಂಗರೂಗಳ ನಾಡಲ್ಲಿ ಈ ಸಾಧನೆ ಮಾಡಿದ ಏಕೈಕ ಭಾರತೀಯ ನಿತೀಶ್ ರೆಡ್ಡಿ

|

Updated on: Dec 28, 2024 | 4:29 PM

Nitesh Kumar Reddy: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಕ್ರಿಕೆಟ್ ಸರಣಿಯಲ್ಲಿ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಜೇಯ 105 ರನ್​ಗಳ ಇನ್ನಿಂಗ್ಸ್ ಆಡಿದ ನಿತೀಶ್ ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳ ದಾಖಲೆಯೂ ಸೇರಿದೆ.

1 / 6
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಮೆಲ್ಬೋರ್ನ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅದ್ಭುತ ಪ್ರದರ್ಶನ ನೀಡಿದ್ದು ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಈ ಸರಣಿಯಲ್ಲಿ ಇದುವರೆಗೆ ಅಮೋಘ ಪ್ರದರ್ಶನ ನೀಡಿರುವ ನಿತೀಶ್ ತಮ್ಮ ಶತಕದ ಇನ್ನಿಂಗ್ಸ್ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.

2 / 6
ಈ ಪಂದ್ಯದಲ್ಲಿ ಫಾಲೋ ಆನ್ ಭೀತಿಯಲ್ಲಿದ್ದ ಟೀಂ ಇಂಡಿಯಾಕ್ಕೆ ಆಪತ್ಬಾಂಧವನಂತೆ ಬಂದ ನಿತೀಶ್ 105 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 176 ಎಸೆತಗಳನ್ನು ಎದುರಿಸಿರುವ ನಿತೀಶ್ 10 ಬೌಂಡರಿ ಮತ್ತು ಒಂದು ಸಿಕ್ಸರ್‌ ಸಹ ಬಾರಿಸಿದ್ದಾರೆ.

3 / 6
ಮೆಲ್ಬೋರ್ನ್ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ನಿತೀಶ್ ಬಾರಿಸಿದ ಏಕೈಕ ಸಿಕ್ಸ್ ಇದೀಗ ಅವರನ್ನು ದಿಗ್ಗಜರ ಪಟ್ಟಿಗೆ ಸೇರ್ಪಡೆಗೊಳ್ಳುವಂತೆ ಮಾಡಿದೆ. ವಾಸ್ತವವಾಗಿ ನಿತೀಶ್ ಬಾರಿಸಿದ ಈ ಸಿಕ್ಸರ್ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಬಾರಿಸಿದ 8ನೇ ಸಿಕ್ಸರ್ ಆಗಿದ್ದು, ಈ ಮೂಲಕ ಅವರು ದಿಗ್ಗಜರ ದಾಖಲೆಯನ್ನು ಸರಿಗಟ್ಟಿದಲ್ಲದೆ ಭಾರತದ ಪರ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ನಿತೀಶ್ ಕುಮಾರ್ ರೆಡ್ಡಿ ಈ ಸಿಕ್ಸರ್‌ನೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಅವರ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಕಾಂಗರೂಗಳ ನಾಡಲ್ಲಿ ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇವರಿಗೂ ಮುನ್ನ 2002-03ರ ಆಶಸ್ ಸರಣಿಯಲ್ಲಿ ಮೈಕಲ್ ವಾನ್ 8 ಸಿಕ್ಸರ್ ಬಾರಿಸಿದ್ದರೆ, 2009-10ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿಂಡೀಸ್ ದಿಗ್ಗಜ ಕ್ರಿಸ್ ಗೇಲ್ 8 ಸಿಕ್ಸರ್ ಬಾರಿಸಿದ್ದರು.

5 / 6
ಇನ್ನು ಈ ಪ್ರವಾಸದಲ್ಲಿ ಮೊದಲ ಟೆಸ್ಟ್ ಪಂದ್ಯದಿಂದಲೂ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ನಿತೀಶ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಚೊಚ್ಚಲ ಪ್ರವಾಸದಲ್ಲೇ ಮ್ಯಾಜಿಕ್ ಮಾಡಿರುವ ಅವರು ಇದುವರೆಗೆ ಇಡೀ ಸರಣಿಯಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರೊಂದಿಗೆ ಈ ಸರಣಿಯಲ್ಲಿ 200 ರನ್‌ಗಳ ಗಡಿ ದಾಟಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿತೀಶ್ ಬಿಟ್ಟರೆ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಮಾತ್ರ 200ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ.

6 / 6
ನಿತೀಶ್ ಕುಮಾರ್ ರೆಡ್ಡಿ ಈ ಸರಣಿಯಲ್ಲಿ ಐದನೇ ಬಾರಿಗೆ 30+ ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳನೇ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಐದು ಬಾರಿ 30+ ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.