ಟೀಮ್ ಇಂಡಿಯಾ ಪರ ಯುವ ಆಟಗಾರ ಪಾದಾರ್ಪಣೆ: ವರದಿ

|

Updated on: Nov 18, 2024 | 2:03 PM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಶುಕ್ರವಾರದಿಂದ ಆರಂಭವಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಆಲ್​ರೌಂಡರ್ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

1 / 6
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಸರಣಿಯ ಮೊದಲ ಪಂದ್ಯವು ಪರ್ತ್​ನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

2 / 6
ಪರ್ತ್ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಹಿಟ್​ಮ್ಯಾನ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಗಾಯಗೊಂಡಿರುವ ಶುಭ್​​ಮನ್ ಗಿಲ್ ಕೂಡ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

3 / 6
ಇಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಅಭಿಮನ್ಯು ಈಶ್ವರನ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಶುಭ್​ಮನ್ ಗಿಲ್ ಸ್ಥಾನದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡಲು ಟೀಮ್ ಇಂಡಿಯಾ ಕೋಚ್ ಬಳಗ ಚರ್ಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಏಕೆಂದರೆ ಪರ್ತ್​ನ ಒಪ್ಟಸ್ ಮೈದಾನದಲ್ಲಿನ ಪಿಚ್ ಉತ್ತಮ ವೇಗ, ಬೌನ್ಸರ್​ಗೆ ಸಹಕಾರಿ ಎಂದು ಈಗಾಗಲೇ ಕ್ಯುರೇಟರ್ ತಿಳಿಸಿದ್ದಾರೆ. ಇತ್ತ ನಿತೀಶ್ ಕುಮಾರ್ ರೆಡ್ಡಿ ವೇಗದ ಬೌಲಿಂಗ್ ಆಲ್​ರೌಂಡರ್. ಅಲ್ಲದೆ ಅತ್ಯುತ್ತಮವಾಗಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯವನ್ನು ಸಹ ಹೊಂದಿದ್ದಾರೆ. ಹೀಗಾಗಿ ಗಿಲ್ ಸ್ಥಾನದಲ್ಲಿ ನಿತೀಶ್​ರನ್ನು ಕಣಕ್ಕಿಳಿಸಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಬಲಪಡಿಸಲು ಪ್ಲ್ಯಾನ್ ರೂಪಿಸಲಾಗಿದೆ.

5 / 6
ಅದರಂತೆ ಪರ್ತ್​ ಟೆಸ್ಟ್ ಪಂದ್ಯದ ಮೂಲಕ ನಿತೀಶ್ ಕುಮಾರ್ ರೆಡ್ಡಿ ಭಾರತದ ಪರ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ 4ನೇ ವೇಗಿಯಾಗಿ ಕಾಣಿಸಿಕೊಳ್ಳುವುದನ್ನು ಎದುರು ನೋಡಬಹುದು.

6 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.