AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿ ಇಂದಿಗೆ ಭರ್ತಿ 5 ವರ್ಷ..!

IND vs AUS: ದು ವರ್ಷಗಳ ಹಿಂದೆ ಇದೇ ದಿನದಂದು ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ಟೆಸ್ಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಹಿಂದೇದೂ ಮಾಡಿರದ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿತ್ತು. ಅಲ್ಲದೆ ಕಾಂಗರೂ ನಾಡಲ್ಲಿ ಈ ಸಾಧನೆ ಮಾಡಿದ ಮೊದಲ ಏಷ್ಯನ್ ತಂಡ ಎಂಬ ದಾಖಲೆಯನ್ನು ಬರೆದಿತ್ತು.

ಪೃಥ್ವಿಶಂಕರ
|

Updated on: Jan 07, 2024 | 3:41 PM

Share
ಜನವರಿ 7 ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶಿಷ್ಟವಾದ ದಿನ. ಏಕೆಂದರೆ ಐದು ವರ್ಷಗಳ ಹಿಂದೆ ಇದೇ ದಿನದಂದು ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ಟೆಸ್ಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಹಿಂದೇದೂ ಮಾಡಿರದ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿತ್ತು. ಅಲ್ಲದೆ ಕಾಂಗರೂ ನಾಡಲ್ಲಿ ಈ ಸಾಧನೆ ಮಾಡಿದ ಮೊದಲ ಏಷ್ಯನ್ ತಂಡ ಎಂಬ ದಾಖಲೆಯನ್ನು ಬರೆದಿತ್ತು.

1 / 7
ವಾಸ್ತವವಾಗಿ ಟೀಂ ಇಂಡಿಯಾ 2018-19 ರಂದು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿತ್ತು. ಸಿಡ್ನಿಯಲ್ಲಿ ನಡೆದ ಕೊನೆಯ ಮಳೆ ಪೀಡಿತ ಟೆಸ್ಟ್ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿತ್ತು. ಈ ಮೂಲಕ 2-1 ಅಂತರದಲ್ಲಿ ಟೆಸ್ಟ್ ಸರಣಿ ವಶಪಡಿಸಿಕೊಂಡು ಇತಿಹಾಸ ನಿರ್ಮಿಸಿತ್ತು.

2 / 7
ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರ 194 ರನ್​ಗಳ ಇನ್ನಿಂಗ್ಸ್ ಆಧಾರದ ಮೇಲೆ ಟೀಂ ಇಂಡಿಯಾ ಈ ಪಂದ್ಯವನ್ನು 31 ರನ್‌ಗಳಿಂದ ಗೆದ್ದುಕೊಂಡಿತು ಮತ್ತು ಇದರೊಂದಿಗೆ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

3 / 7
ಆದರೆ, ಇದಾದ ಬಳಿಕ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಿರುಗೇಟು ನೀಡಿತು. ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಸೋಲಿಸಿ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿತು.

4 / 7
ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದ ಭಾರತ, ಆತಿಥೇಯ ತಂಡವನ್ನು 137 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿತು.

5 / 7
ಇನ್ನು ಸಿಡ್ನಿಯಲ್ಲಿ ನಡೆದ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಸನಿಹದಲ್ಲಿತ್ತಾದರೂ ಮಳೆರಾಯ ಅದಕ್ಕೆ ಅವಕಾಶ ನೀಡಲಿಲ್ಲ. ಅಂತಿಮವಾಗಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಆ ಪಂದ್ಯದಲ್ಲಿ ಪೂಜಾರ ಮತ್ತು ರಿಷಬ್ ಪಂತ್ ಅವರ ಶತಕಗಳ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 622 ರನ್ ಗಳಿಸಿತ್ತು.

6 / 7
ಸರಣಿಯಲ್ಲಿ 521 ರನ್ ಕಲೆಹಾಕಿದ ಚೇತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ನಾಲ್ಕು ಪಂದ್ಯಗಳ ಸರಣಿಯಲ್ಲಿ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ 21 ವಿಕೆಟ್ ಪಡೆದರು. ಅವರೊಂದಿಗೆ ಮೊಹಮ್ಮದ್ ಶಮಿ 18 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮೂರು ಪಂದ್ಯಗಳನ್ನು ಆಡಿ 11 ವಿಕೆಟ್ ಪಡೆದರು.

7 / 7
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ