- Kannada News Photo gallery Cricket photos IND vs AUS r ashwin have chance to break anil kumbles most test wickets record against australia
IND vs AUS: ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಅಶ್ವಿನ್..!
IND vs AUS: ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 467 ವಿಕೆಟ್ ಪಡೆದಿದ್ದಾರೆ. ಹಾಗೆಯೇ 113 ಏಕದಿನ ಪಂದ್ಯಗಳಲ್ಲಿ 151 ವಿಕೆಟ್ ಹಾಗೂ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದಿದ್ದಾರೆ. ಐಪಿಎಲ್‌ನ 184 ಪಂದ್ಯಗಳಲ್ಲಿ 157 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
Updated on:Mar 06, 2023 | 3:59 PM

ಬಾರ್ಡರ್-ಗವಾಸ್ಕರ್ ಸರಣಿಯ 4ನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಉಭಯ ತಂಡಗಳಿಗೂ ಈ ಟೆಸ್ಟ್ ಮಹತ್ವದಾಗಿದ್ದು, ಇದೇ ಟೆಸ್ಟ್‌ನಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ದಾಖಲೆ ನಿರ್ಮಿಸುವ ತವಕದಲ್ಲಿದ್ದಾರೆ.

ಅಹಮದಾಬಾದ್‌ನಲ್ಲಿ ರವಿಚಂದ್ರನ್ ಅಶ್ವಿನ್ ಭಾರತದ ಲೆಜೆಂಡರಿ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ಬೃಹತ್ ದಾಖಲೆಯನ್ನು ಮುರಿಯುವ ಅವಕಾಶ ಪಡೆದಿದ್ದು, ನಾಲ್ಕನೇ ಟೆಸ್ಟ್‌ನಲ್ಲಿ ಅಶ್ವಿನ್ ಇನ್ನೂ 5 ವಿಕೆಟ್ ಪಡೆದರೆ, ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 112 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧ ಭಾರತ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧ 111 ವಿಕೆಟ್ ಪಡೆದಿದ್ದಾರೆ. ನಾಲ್ಕನೇ ಟೆಸ್ಟ್‌ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಪಡೆದರೆ ಅನಿಲ್ ಕುಂಬ್ಳೆ ದಾಖಲೆ ಮುರಿಯಬಹುದಾಗಿದೆ.

ಇದರೊಂದಿಗೆ ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಬಾರಿ 5 ವಿಕೆಟ್‌ಗಳನ್ನು ಪಡೆದ ದಾಖಲೆ ಮಾಡಿರುವ ಅನಿಲ್ ಕುಂಬ್ಳೆ ಅವರ ಮತ್ತೊಂದು ದಾಖಲೆಯನ್ನು ಸಹ ಅಶ್ವಿನ್ ಮುರಿಯುವ ಸಾಧ್ಯತೆಗಳಿವೆ. ರವಿಚಂದ್ರನ್ ಅಶ್ವಿನ್ ತವರಿನಲ್ಲಿ ಇದುವರೆಗೆ 25 ಬಾರಿ 5 ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಈ ವಿಚಾರದಲ್ಲಿ ಅಶ್ವಿನ್ ಅವರು ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅನಿಲ್ ಕುಂಬ್ಳೆ ಭಾರತದಲ್ಲಿ 25 ಬಾರಿ 5 ವಿಕೆಟ್ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ ಅಹಮದಾಬಾದ್ ಟೆಸ್ಟ್‌ನಲ್ಲಿ 5 ವಿಕೆಟ್ ಪಡೆದರೆ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

ಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 467 ವಿಕೆಟ್ ಪಡೆದಿದ್ದಾರೆ. ಹಾಗೆಯೇ 113 ಏಕದಿನ ಪಂದ್ಯಗಳಲ್ಲಿ 151 ವಿಕೆಟ್ ಹಾಗೂ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದಿದ್ದಾರೆ. ಐಪಿಎಲ್‌ನ 184 ಪಂದ್ಯಗಳಲ್ಲಿ 157 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
Published On - 3:59 pm, Mon, 6 March 23




