AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ರೋಹಿತ್ ಶರ್ಮಾ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಮ್ಯಾಚ್​ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Dec 24, 2024 | 8:53 AM

Share
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಈ ಅಭ್ಯಾಸ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಗಾಯಗೊಂಡಿದ್ದ ಹಿಟ್​​ಮ್ಯಾನ್ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದರು.

1 / 6
ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾನಂದ ಎಸೆದ ಚೆಂಡು ರೋಹಿತ್ ಶರ್ಮಾ ಅವರ ಎಡ ಮೊಣಕಾಲಿಗೆ ಬಡಿದಿತ್ತು. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದರು. ಅಲ್ಲದೆ ಆ ಬಳಿಕ ಅವರು ಬ್ಯಾಟಿಂಗ್ ಪ್ರಾಕ್ಟೀಸ್ ನಡೆಸಿರಲಿಲ್ಲ.

2 / 6
ಇದಾದ ಬಳಿಕ ಅಭ್ಯಾಸದ ವೇಳೆ ಕಾಣಿಸಿಕೊಳ್ಳದ ಕಾರಣ ರೋಹಿತ್ ಶರ್ಮಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದೀಗ ಟೀಮ್ ಇಂಡಿಯಾ ನಾಯಕನ ಗಾಯದ ಕುರಿತಾದ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ.

3 / 6
ತಮ್ಮ ಗಾಯದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ರೋಹಿತ್ ಶರ್ಮಾ, ಅಭ್ಯಾಸದ ವೇಳೆ ಮೊಣಕಾಲಿಗೆ ಗಾಯವಾಗಿತ್ತು. ಇದೀಗ ನೋವು ಸಂಪೂರ್ಣ ಮಾಯವಾಗಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯವಾಡಲು ನಾನು ಫಿಟ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದನ್ನು ಖುದ್ದು ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.

4 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸುವುದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

6 / 6
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?