Rohit Sharma: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Feb 09, 2023 | 10:58 PM

India vs Australia 1st Test: ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

1 / 6
ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 177 ರನ್​ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಹಿಟ್​ಮ್ಯಾನ್ ಸ್ಪೋಟಕ ಆರಂಭ ಒದಗಿಸಿದ್ದರು.

2 / 6
ಬಿರುಸಿನ ಬ್ಯಾಟಿಂಗ್ ಮೂಲಕ ಆಸೀಸ್ ಬೌಲರ್​ಗಳನ್ನು ದಂಡಿಸಿದ ರೋಹಿತ್ ಶರ್ಮಾ ಕೇವಲ 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 1 ವಿಕೆಟ್ ನಷ್ಟಕ್ಕೆ 77 ರನ್​ಗೆ ತಂದು ನಿಲ್ಲಿಸಿದ್ದಾರೆ.

3 / 6
ಸದ್ಯ 56 ರನ್​ಗಳಿಸಿ ಅಜೇಯರಾಗಿ ಉಳಿದಿರುವ ಹಿಟ್​ಮ್ಯಾನ್​ 2ನೇ ದಿನದಾಟದಲ್ಲಿ ಶತಕ ಪೂರೈಸುವ ನಿರೀಕ್ಷೆಯಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಶತಕ ಬಾರಿಸಿದ್ದಲ್ಲಿ ಹೊಸ ದಾಖಲೆಯೊಂದು ಅವರ ಹೆಸರಿಗೆ ಸೇರ್ಪಡೆಯಾಗಲಿದೆ.

4 / 6
ಅಂದರೆ ನಾಯಕನಾಗಿ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಯಾವುದೇ ಆಟಗಾರ ಇದುವರೆಗೆ ಶತಕ ಬಾರಿಸಿಲ್ಲ. ಈ ಹಿಂದೆ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಹಾಗೂ ಧೋನಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಈ ಇಬ್ಬರು ಆಟಗಾರರು ತಮ್ಮ ನಾಯಕರಾಗಿ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿರಲಿಲ್ಲ.

5 / 6
ಇದೀಗ ಏಕದಿನ, ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಶತಕ ಬಾರಿಸಿರುವ ರೋಹಿತ್ ಶರ್ಮಾಗೆ ತಮ್ಮದೇ ನಾಯಕತ್ವದಲ್ಲಿ ಟೆಸ್ಟ್ ಸೆಂಚುರಿ ಸಿಡಿಸುವ ಉತ್ತಮ ಅವಕಾಶವಿದೆ. ಇದರೊಂದಿಗೆ ಮೂರು ಮಾದರಿಯಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾಗಲಿದ್ದಾರೆ.

6 / 6
ಅದರಂತೆ ನಾಗ್ಪುರ ಮೈದಾನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಕಾದು ನೋಡಬೇಕಿದೆ.