AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಬೌಲರ್​ಗಿಂತ ಕಡೆಯಾದ ರೋಹಿತ್ ಶರ್ಮಾ ಬ್ಯಾಟಿಂಗ್

Australia vs India: ಈ ವರ್ಷ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ನಲ್ಲಿ 26 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 619 ರನ್​ಗಳು ಮಾತ್ರ. ಅಂದರೆ ಹಿಟ್​ಮ್ಯಾನ್ 24.76ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಈವರೆಗೆ ಗಳಿಸಿದ ಒಟ್ಟು ಮೊತ್ತ ಕೇವಲ 31 ರನ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Dec 30, 2024 | 9:23 AM

Share
ಮೂರು ಪಂದ್ಯಗಳು... ಐದು ಇನಿಂಗ್ಸ್​... ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈವರೆಗೆ ಕಲೆಹಾಕಿರುವುದು ಕೇವಲ 31 ರನ್​ಗಳು. ಇದರಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್ 10. ಇನ್ನುಳಿದ ಎಲ್ಲಾ ಇನಿಂಗ್ಸ್​ಗಳಲ್ಲೂ ಒಂದಂಕಿ ಮೊತ್ತವನ್ನು ದಾಟಿಲ್ಲ.

1 / 5
ಅದರಲ್ಲೂ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಇನಿಂಗ್ಸ್ ಆರಂಭಿಸಿದ ಹಿಟ್​ಮ್ಯಾನ್ ಮೊದಲ ಇನಿಂಗ್ಸ್​ನಲ್ಲಿ 3 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 9 ರನ್ ಬಾರಿಸಿ ಔಟಾಗಿದ್ದಾರೆ. ಈ ಮೂಲಕ 5 ಇನಿಂಗ್ಸ್​ಗಳಿಂದ 31 ರನ್​​ಗಳಿಸಿದ್ದಾರೆ.

2 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ, ಇದೇ ಮೆಲ್ಬೋರ್ನ್​ ಮೈದಾನದಲ್ಲಿ ಆಡಿದ ದ್ವಿತೀಯ ಇನಿಂಗ್ಸ್​​ವೊಂದರಲ್ಲೇ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 41 ರನ್​​ ಕಲೆಹಾಕಿದ್ದಾರೆ. ಅದು ಕೂಡ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಹಾಗೂ ಅನುಭವಿ ಬೌಲರ್​ಗಳಾದ ರವೀಂದ್ರ ಜಡೇಜಾ ಹಾಗೂ ಸಿರಾಜ್ ವಿರುದ್ಧ ಸೆಟೆದು ನಿಲ್ಲುವ ಮೂಲಕ.

3 / 5
ಅಂದರೆ ಇಲ್ಲಿ ರೋಹಿತ್ ಶರ್ಮಾ ಐದು ಇನಿಂಗ್ಸ್​ಗಳಲ್ಲಿ ಕಲೆಹಾಕಿದ ಒಟ್ಟು ಸ್ಕೋರ್​​ಗಿಂತ ನಾಥನ್ ಲಿಯಾನ್ ಒಂದೇ ಪಂದ್ಯದಲ್ಲಿ ಗಳಿಸಿದ ಸ್ಕೋರ್ ಹೆಚ್ಚಿದೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಮತ್ತೋರ್ವ ಬೌಲರ್ ಸ್ಕಾಟ್ ಬೋಲ್ಯಾಂಡ್​ ಮೆಲ್ಬೋರ್ನ್​​​ನಲ್ಲೇ 21 ರನ್​ ಕಲೆಹಾಕಿದ್ದಾರೆ.

4 / 5
ಆದರೆ ಭಾರತ ತಂಡದ ನಾಯಕ ಕಳೆದ 5 ಇನಿಂಗ್ಸ್​ಗಳಲ್ಲಿ ಗಳಿಸಿರುವುದು ಕೇವಲ 31 ರನ್​ಗಳು ಮಾತ್ರ. ಅದು ಕೂಡ 6.20 ಸರಾಸರಿಯಲ್ಲಿ ಎಂಬುದೇ ಅಚ್ಚರಿ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ