Team India: ಯಾರಾಗ್ತಾರೆ ಟೀಮ್ ಇಂಡಿಯಾದ ಉಪನಾಯಕ: ರೋಹಿತ್ ಶರ್ಮಾ ಮುಂದಿದೆ 3 ಆಯ್ಕೆ..!

India Test Squad: ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ.

ಝಾಹಿರ್ ಯೂಸುಫ್
|

Updated on: Feb 21, 2023 | 3:59 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ 17 ಸದಸ್ಯರ ಈ ತಂಡದ ಉಪನಾಯಕನನ್ನು ಹೆಸರಿಸಲಾಗಿಲ್ಲ. ಅಂದರೆ ಈ ಹಿಂದೆ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ವೈಸ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಲಾಗಿದೆ.

1 / 8
ಇದಾಗ್ಯೂ ಆಯ್ಕೆ ಸಮಿತಿಯು ಹೊಸ ಉಪನಾಯಕ ಯಾರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಆಯ್ಕೆಯನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

2 / 8
ಅಂದರೆ ಭಾರತ ತಂಡದ ಉಪನಾಯಕನನ್ನು ಆರಿಸುವ ಅವಕಾಶವನ್ನು ರೋಹಿತ್ ಶರ್ಮಾ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಯಾರು ಹೊಸ ವೈಸ್ ಕ್ಯಾಪ್ಟನ್ ಆಗಲಿದ್ದಾರೆ ಎಂಬ ಕುತೂಹಲ ಶುರುವಾಗಿದೆ. ಇತ್ತ ಹಿಟ್​​ಮ್ಯಾನ್ ಮುಂದೆ 3 ಆಯ್ಕೆಗಳಿವೆ. ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಖಚಿತ ಎನ್ನಲಾಗುತ್ತಿದೆ. ಅವರೆಂದರೆ...

3 / 8
ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಥಿರ ಪ್ರದರ್ಶನ ನೀಡುವ ಆಟಗಾರ. ಅದು ಬೌಲಿಂಗ್​ನಲ್ಲಿ ಆಗಿರಲಿ, ಅಥವಾ ಬ್ಯಾಟಿಂಗ್​ನಲ್ಲಿರಲಿ ಅಶ್ವಿನ್​ ಕಡೆಯಿಂದ ತಂಡಕ್ಕೆ ಅತ್ಯಮೂಲ್ಯ ಕಾಣಿಕೆ ಇದ್ದೇ ಇರುತ್ತದೆ. ಇತ್ತ ಸ್ಥಿರ ಪ್ರದರ್ಶನ ನೀಡುವ ಆಟಗಾರರಿಗೆ ಉಪನಾಯಕನ ಸ್ಥಾನ ನೀಡಬೇಕಾಗುತ್ತದೆ. ಏಕೆಂದರೆ ಅವರು ಪ್ಲೇಯಿಂಗ್ ಇಲೆವೆನ್​ನ ಭಾಗವೇ ಆಗಿರಲಿದ್ದಾರೆ. ಹೀಗಾಗಿ 36 ವರ್ಷದ ಅಶ್ವಿನ್ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

4 / 8
ರವೀಂದ್ರ ಜಡೇಜಾ: ನಾಯಕ ರೋಹಿತ್ ಶರ್ಮಾ ಮುಂದಿರುವ 2ನೇ ಆಯ್ಕೆ ಎಂದರೆ ರವೀಂದ್ರ ಜಡೇಜಾ. ಗಾಯದಿಂದ ಚೇತರಿಸಿಕೊಂಡು ಕಂಬ್ಯಾಕ್ ಮಾಡಿರುವ ಜಡ್ಡು ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಭವಿಷ್ಯ ದೃಷ್ಟಿಯಲ್ಲಿ ಉಪನಾಯಕನನ್ನು ಆಯ್ಕೆ ಮಾಡುವುದಾದರೆ ಆ ಸ್ಥಾನ ರವೀಂದ್ರ ಜಡೇಜಾ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

5 / 8
ಚೇತೇಶ್ವರ ಪೂಜಾರ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಚೇತೇಶ್ವರ ಪೂಜಾರ ಅವರ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಏಕೆಂದರೆ ಭಾರತ ತಂಡದ ಪರ 100 ಟೆಸ್ಟ್ ಪಂದ್ಯಗಳನ್ನಾಡಿರುವ ಅನುಭವವನ್ನು ಪೂಜಾರ ಹೊಂದಿದ್ದಾರೆ. ಹೀಗಾಗಿ ಅನುಭವಿ ಆಟಗಾರನಿಗೆ ಉಪನಾಯಕ ಸ್ಥಾನ ನೀಡುವುದಾದರೆ ಚೇತೇಶ್ವರ ಪೂಜಾರ ಟೆಸ್ಟ್ ತಂಡದ ವೈಸ್ ಕ್ಯಾಪ್ಟನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

6 / 8
ಈ ಮೂವರು ಆಟಗಾರರು ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಕಾರಣ ಇವರಲ್ಲಿ ಯಾರನ್ನು ರೋಹಿತ್ ಶರ್ಮಾ  ಆಯ್ಕೆ ಮಾಡಲಿದ್ದಾರೆ ಎಂಬುದೇ ಕುತೂಹಲ.

7 / 8
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

8 / 8
Follow us
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ