AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ್ತ್​ ಟೆಸ್ಟ್​ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯ

Border-Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಝಾಹಿರ್ ಯೂಸುಫ್
|

Updated on: Nov 18, 2024 | 7:25 AM

Share
ಭಾರತ‌ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ನವೆಂಬರ್ 22 ರಿಂದ ಆರಂಭವಾಗಲಿರುವ ಈ ಪಂದ್ಯದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ರೋಹಿತ್ ಶರ್ಮಾ ಬಿಸಿಸಿಐಗೆ ತಿಳಿಸಿದ್ದಾರೆ. ಹೀಗಾಗಿ ಪರ್ತ್​ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಕಾಣಿಸಿಕೊಳ್ಳುವುದಿಲ್ಲ.

1 / 5
ರೋಹಿತ್ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದ್ದು, ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕ ನವೆಂಬರ್‌ 22 ರಿಂದ ಆರಂಭವಾಗುವ ಮೊದಲ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯದ ವೇಳೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

2 / 5
ಇನ್ನು ರೋಹಿತ್ ಶರ್ಮಾ ಅವರು ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಹಾಗೆಯೇ ಹಿಟ್ ಮ್ಯಾನ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅಥವಾ ಅಭಿಮನ್ಯು ಈಶ್ವರನ್ ಭಾರತದ ಪರ ಇನಿಂಗ್ಸ್ ಆರಂಭಿಸಬಹುದು.

3 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ