- Kannada News Photo gallery Cricket photos IND vs AUS: Rohit Sharma will be unavailable for the first ODI
IND vs AUS: ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನಾಯಕ: ಕಾರಣ ತಿಳಿಸಿದ ಬಿಸಿಸಿಐ
India Odi Squad For Australia: ರೋಹಿತ್ ಶರ್ಮಾ ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರಾಗಿ ಆಯ್ಕೆ ಮಾಡಿರುವುದೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಬಿಸಿಸಿಐ ಸ್ಪಷ್ಟನೆ ನೀಡಿದೆ.
Updated on: Feb 19, 2023 | 6:30 PM

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಮಾರ್ಚ್ 17 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಮ್ ಇಂಡಿಯಾ ಪ್ರಕಟಿಸಲಾಗಿದೆ. ವಿಶೇಷ ಎಂದರೆ ಈ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಇತ್ತ ರೋಹಿತ್ ಶರ್ಮಾ ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರಾಗಿ ಆಯ್ಕೆ ಮಾಡಿರುವುದೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಬಿಸಿಸಿಐ ಸ್ಪಷ್ಟನೆ ನೀಡಿದೆ.

ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಗಾಗಿ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯುವ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ಮಾರ್ಚ್ 19 ರಂದು ನಡೆಯುವ 2ನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅವರ ಆಗಮನದೊಂದಿಗೆ ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಭಾರತ ಏಕದಿನ ತಂಡ: ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.
























