AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೂರ್ಯ ಅಥವಾ ರುತುರಾಜ್? ಹಾರ್ದಿಕ್ ಅನುಪಸ್ಥಿತಿಯಲ್ಲಿ ಯಾರಿಗೆ ಟೀಂ ಇಂಡಿಯಾ ನಾಯಕತ್ವ?

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿ ನವೆಂಬರ್ 23 ರಿಂದ ಆರಂಭವಾಗಲಿದೆ. ಇಂಜುರಿಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿರುವ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಸರಣಿಗೂ ಆಡುವ ಸಾಧ್ಯತೆ ಕಡಿಮೆ.

ಪೃಥ್ವಿಶಂಕರ
|

Updated on: Nov 11, 2023 | 9:31 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿ ನವೆಂಬರ್ 23 ರಿಂದ ಆರಂಭವಾಗಲಿದೆ. ಇಂಜುರಿಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿರುವ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಸರಣಿಗೂ ಆಡುವ ಸಾಧ್ಯತೆ ಕಡಿಮೆ.

1 / 9
ಹೀಗಾಗಿ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಯಾರಿಗೆ ಟೀಂ ಇಂಡಿಯಾದ ನಾಯಕತ್ವ ಸಿಗಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ವರದಿ ಪ್ರಕಾರ, ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

2 / 9
ರುತುರಾಜ್ ನಾಯಕತ್ವದಲ್ಲಿ ಭಾರತ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದೆ. ಸದ್ಯ ಸೂರ್ಯ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ. ಹಾಗಾಗಿ ಈ ಇಬ್ಬರಲ್ಲಿ ಒಬ್ಬರಿಗೆ ಬಿಸಿಸಿಐ ನಾಯಕತ್ವ ನೀಡುವ ಸಾಧ್ಯತೆ ಇದೆ.

3 / 9
ಅಲ್ಲದೆ ಈ ಟಿ20 ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಲೋಕೇಶ್ ರಾಹುಲ್, ರವೀಂದ್ರ ಜಡೇಜಾ ಮತ್ತು ಎಲ್ಲಾ ಮೂವರು ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡುವ ನಿರೀಕ್ಷೆಯಿದೆ.

4 / 9
ಬಿಸಿಸಿಐ ಮೂಲಗಳ ಪ್ರಕಾರ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲ್ಲಿರುವ ಪಾಂಡ್ಯ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ ಆಗುವ ಸಾಧ್ಯತೆ ಹೆಚ್ಚಿದೆ. ಡಿಸೆಂಬರ್ 10 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಡೆಯಲಿದೆ.

5 / 9
ಮುಂದಿನ ವರ್ಷ ಟಿ20 ವಿಶ್ವಕಪ್ ಜೂನ್-ಜುಲೈನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ. ಹೀಗಾಗಿ ಆಸ್ಟ್ರೇಲಿಯ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಭಾರತಕ್ಕೆ ಮಹತ್ವದ್ದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

6 / 9
ಇವರಲ್ಲದೆ ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಯುಜ್ವೇಂದ್ರ ಚಹಾಲ್ ಕೂಡ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಸಯೀದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿನ ಪ್ರದರ್ಶನವನ್ನೂ ಆಯ್ಕೆ ಸಮಿತಿ ಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

7 / 9
ಹೀಗಾಗಿ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಭುವನೇಶ್ವರ್ ಕುಮಾರ್ ಅವರಿಗೆ ಅವಕಾಶ ಸಿಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಭುವಿಗೂ ಕೊನೆಯ ಅವಕಾಶ ನೀಡಬಹುದಾಗಿದೆ. ಏಕೆಂದರೆ ಭುವಿ ದೇಶೀಯ ಟೂರ್ನಿಯಲ್ಲಿ ಏಳು ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ. ಅಭಿಷೇಕ್ ಎರಡು ಶತಕ ಮತ್ತು ಮೂರು ಅರ್ಧಶತಕಗಳೊಂದಿಗೆ 485 ರನ್ ಬಾರಿಸಿದ್ದಾರೆ.

8 / 9
ರಿಯಾನ್‌ಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ತುಂಬಾ ವಿಶೇಷವಾಗಿತ್ತು. ಅವರು ಬಾಲ್ ಮತ್ತು ಬ್ಯಾಟ್ ಎರಡರಲ್ಲೂ ಮಿಂಚಿನ ಪ್ರದರ್ಶನ ನೀಡಿದರು. ಪರಾಗ್ ಈ ಟೂರ್ನಿಯಲ್ಲಿ 510 ರನ್‌ಗಳ ಜೊತೆಗೆ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆದರೆ ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ ಮತ್ತು ರಿಂಕು ಸಿಂಗ್ ಅವರಂತಹ ಬ್ಯಾಟ್ಸ್‌ಮನ್‌ಗಳ ಸಮ್ಮುಖದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಅವರು ಸ್ಥಾನ ಪಡೆಯುವುದು ಕಷ್ಟಕರವಾಗಿದೆ

9 / 9
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?