IND vs AUS: ಟೀಮ್ ಇಂಡಿಯಾಗೆ ‘ಶುಭ್’ ಸೂಚನೆ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ (ಡಿ. 6) ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಳು-ಬೆಳಕಿನ ಟೆಸ್ಟ್ ಪಂದ್ಯ ಎಂಬುದು ವಿಶೇಷ.
1 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್ ಇಲೆವೆನ್ ವಿರುದ್ಧ 2 ದಿನಗಳ ಅಭ್ಯಾಸ ಪಂದ್ಯವಾಡಲಿದೆ. ಕ್ಯಾನ್ಬೆರಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
2 / 5
ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಫೀಲ್ಡಿಂಗ್ ಅಭ್ಯಾಸ ವೇಳೆ ಶುಭ್ಮನ್ ಗಿಲ್ ಅವರ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು. ಆದರೆ ಶುಕ್ರವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಗಿಲ್ ಕಾಣಿಸಿಕೊಂಡಿದ್ದಾರೆ.
3 / 5
ಗಾಯದಿಂದ ಚೇತರಿಸಿಕೊಂಡಿರುವ ಶುಭ್ಮನ್ ಗಿಲ್ ಶುಕ್ರವಾರ ನೆಟ್ಸ್ನಲ್ಲಿ ಒಂದಷ್ಟು ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದು, ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅಡಿಲೇಡ್ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಕಾಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
4 / 5
ಇನ್ನು ಶುಭ್ಮನ್ ಗಿಲ್ ಆಗಮನದೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಿಂದ ಕನ್ನಡಿಗ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ. ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ ಪಂದ್ಯದಲ್ಲಿ ಗಿಲ್ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಪಡಿಕ್ಕಲ್ ಕಣಕ್ಕಿಳಿದಿದ್ದರು. ಇದೀಗ ಪಿಂಕ್ ಬಾಲ್ ಟೆಸ್ಟ್ನಲ್ಲಿ ಗಿಲ್ ಕಣಕ್ಕಿಳಿದರೆ, ಆಡುವ ಬಳಗದಿಂದ ಪಡಿಕ್ಕಲ್ ಹೊರಬೀಳುವುದು ಖಚಿತ.
5 / 5
ಟೀಂ ಇಂಡಿಯಾ
Published On - 7:53 am, Sat, 30 November 24