AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾಗೆ ಬಿಗ್ ಶಾಕ್: ಮೊದಲ ಪಂದ್ಯದಿಂದ ಸ್ಟಾರ್ ಆಟಗಾರ ಔಟ್

Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಝಾಹಿರ್ ಯೂಸುಫ್
|

Updated on: Nov 17, 2024 | 8:04 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್ ಗಿಲ್ ಅಲಭ್ಯರಾಗಲಿದ್ದಾರೆ.

1 / 6
ವೆಸ್ಟರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೇಷನ್ ​​(WACA) ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟೀಮ್ ಇಂಡಿಯಾದ ಅಭ್ಯಾಸದ ವೇಳೆ ಶುಭ್​​ಮನ್ ಗಿಲ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮೊದಲ ಪಂದ್ಯದಿಂದ ಅವರು ಹೊರಗುಳಿಯುತ್ತಿದ್ದಾರೆ.

2 / 6
ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ವೈದ್ಯಕೀಯ ಪರಿಶೀಲನೆ ಬಳಿಕ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಅದರಂತೆ ಪರ್ತ್​ನಲ್ಲಿ ನಡೆಯಲಿರುವ ಪಂದ್ಯದಿಂದ ಹೊರಗುಳಿಯಲು ಗಿಲ್ ನಿರ್ಧರಿಸಿದ್ದಾರೆ. ಇನ್ನು ಶುಭ್​​ಮನ್ ಹೊರಗುಳಿದರೆ, ಅವರ ಸ್ಥಾನದಲ್ಲಿ ಅಭಿಮನ್ಯು ಈಶ್ವರನ್​ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಇತ್ತ ಪ್ರತಿಷ್ಠಿತ ಸರಣಿಗೂ ಮುನ್ನ ಶುಭ್​ಮನ್ ಗಿಲ್ ಗಾಯಗೊಂಡಿರುವುದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆ ಎನ್ನಬಹುದು. ಏಕೆಂದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗಿಲ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದೀಗ ಇನ್​ ಫಾರ್ಮ್ ಆಟಗಾರ ಹೊರಗುಳಿಯುತ್ತಿರುವುದು ಭಾರತ ತಂಡದ ಚಿಂತೆಯನ್ನು ಹೆಚ್ಚಿಸಿರುವುದು ಸುಳ್ಳಲ್ಲ.

4 / 6
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್​ನಲ್ಲಿ ಆರಂಭವಾದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ಅಡಿಲೇಡ್  ಆತಿಥ್ಯವಹಿಸಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

6 / 6
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​

ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!

ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ