ಟೀಮ್ ಇಂಡಿಯಾ ವಿರುದ್ಧ ದಾಖಲೆಯ ಸೆಂಚುರಿ ಸಿಡಿಸಿದ ಸ್ಟೀವ್ ಸ್ಮಿತ್
Australia vs India, 3rd Test: ಬ್ರಿಸ್ಬೇನ್ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ವಿಶೇಷ ಎಂದರೆ ಇದು ಸ್ಮಿತ್ ಅವರ 33ನೇ ಟೆಸ್ಟ್ ಶತಕ. ಈ ಶತಕದೊಂದಿಗೆ ಆಸೀಸ್ ದಾಂಡಿಗ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.
Updated on: Dec 15, 2024 | 12:09 PM

ಒರೋಬ್ಬರಿ 1 ವರ್ಷ... 26 ಇನಿಂಗ್ಸ್ಗಳ ಬಳಿಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಸಿಡಿಸಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸ್ಮಿತ್ 185 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಒಂದು ವರ್ಷಗಳ ಶತಕದ ಬರವನ್ನು ನೀಗಿಸಿದರು.

ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ ಕಲಾತ್ಮಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಕಳೆದೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಸ್ಮಿತ್ ಈ ಬಾರಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ಸ್ಮಿತ್ ಆಕರ್ಷಕ ಸೆಂಚುರಿ ಸಿಡಿಸಿದರು.

ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ವಿರುದ್ಧ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿನಲ್ಲಿತ್ತು.

ಟೀಮ್ ಇಂಡಿಯಾ ವಿರುದ್ಧ 30 ಟೆಸ್ಟ್ ಪಂದ್ಯಗಳಲ್ಲಿ 55 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 10 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಮಿತ್ ಸರಿಗಟ್ಟಿದ್ದಾರೆ.

ಭಾರತದ ವಿರುದ್ಧ ಈವರೆಗೆ 22* ಟೆಸ್ಟ್ ಪಂದ್ಯಗಳಲ್ಲಿ 41 ಇನಿಂಗ್ಸ್ ಆಡಿರುವ ಸ್ಟೀವ್ ಸ್ಮಿತ್ 10 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ನಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇನ್ನು ಈ ಪಂದ್ಯದಲ್ಲಿ 190 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 12 ಫೋರ್ಗಳೊಂದಿಗೆ 101 ರನ್ ಬಾರಿಸಿ ಜಸ್ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಅತ್ತ 87 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 6 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



