ಟೀಮ್ ಇಂಡಿಯಾ ವಿರುದ್ಧ ದಾಖಲೆಯ ಸೆಂಚುರಿ ಸಿಡಿಸಿದ ಸ್ಟೀವ್ ಸ್ಮಿತ್

|

Updated on: Dec 15, 2024 | 12:09 PM

Australia vs India, 3rd Test: ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ವಿಶೇಷ ಎಂದರೆ ಇದು ಸ್ಮಿತ್ ಅವರ 33ನೇ ಟೆಸ್ಟ್ ಶತಕ. ಈ ಶತಕದೊಂದಿಗೆ ಆಸೀಸ್ ದಾಂಡಿಗ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

1 / 6
ಒರೋಬ್ಬರಿ 1 ವರ್ಷ... 26 ಇನಿಂಗ್ಸ್​ಗಳ ಬಳಿಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್​​ನಲ್ಲಿ ಶತಕ ಸಿಡಿಸಿದ್ದಾರೆ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಮಿತ್ 185 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಒಂದು ವರ್ಷಗಳ ಶತಕದ ಬರವನ್ನು ನೀಗಿಸಿದರು.

2 / 6
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ ಕಲಾತ್ಮಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಕಳೆದೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಸ್ಮಿತ್ ಈ ಬಾರಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್​ ಗಳಿಸುತ್ತಾ ಸಾಗಿದ ಸ್ಮಿತ್ ಆಕರ್ಷಕ ಸೆಂಚುರಿ ಸಿಡಿಸಿದರು.

3 / 6
ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿನಲ್ಲಿತ್ತು.

4 / 6
ಟೀಮ್ ಇಂಡಿಯಾ ವಿರುದ್ಧ 30 ಟೆಸ್ಟ್ ಪಂದ್ಯಗಳಲ್ಲಿ 55 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 10 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಮಿತ್ ಸರಿಗಟ್ಟಿದ್ದಾರೆ.

5 / 6
ಭಾರತದ ವಿರುದ್ಧ ಈವರೆಗೆ 22* ಟೆಸ್ಟ್​ ಪಂದ್ಯಗಳಲ್ಲಿ 41 ಇನಿಂಗ್ಸ್ ಆಡಿರುವ ಸ್ಟೀವ್ ಸ್ಮಿತ್ 10 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ 190 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 12 ಫೋರ್​​ಗಳೊಂದಿಗೆ 101 ರನ್ ಬಾರಿಸಿ ಜಸ್​ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಅತ್ತ 87 ಓವರ್​​ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 6 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿದೆ.