- Kannada News Photo gallery Cricket photos IND vs AUS: Suryakumar Yadav makes unique record with Test debut
IND vs AUS: ಟೆಸ್ಟ್ನಲ್ಲಿ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
India vs Australia 1st Test: ಮಾಜಿ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರಿಂದ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ಯಾಪ್ ಪಡೆದುಕೊಂಡರು.
Updated on: Feb 09, 2023 | 8:29 PM

ನಾಗ್ಪುರದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಪಂದ್ಯಕ್ಕೂ ಮುನ್ನ ಮಾಜಿ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರಿಂದ ಸೂರ್ಯ ಟೆಸ್ಟ್ ಕ್ಯಾಪ್ ಪಡೆದುಕೊಂಡರು. ಇದರೊಂದಿಗೆ ವಿಶೇಷ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಪಾಲಾಯಿತು.

ಹೌದು, ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಪದಾರ್ಪಣೆ ಮಾಡುತ್ತಿರುವುದು ತಮ್ಮ 32ನೇ ವಯಸ್ಸಿನಲ್ಲಿ. ಅಂದರೆ 30 ವರ್ಷದ ಬಳಿಕ ಮೂರು ಮಾದರಿಯಲ್ಲಿ ಟೀಮ್ ಇಂಡಿಯಾ ಪರ ಆಡಿದ ಹೆಗ್ಗಳಿಕೆಯೊಂದು ಸೂರ್ಯನ ಪಾಲಾಗಿದೆ.

ಇದಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ 30 ವರ್ಷ 181 ದಿನಗಳಾಗಿದ್ದ ವೇಳೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಪದಾರ್ಪಣೆ ಮಾಡಿದ್ದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಪದಾರ್ಪಣೆ ಮಾಡಿದ ಭಾರತದ ಹಿರಿಯ ಆಟಗಾರ ಎನಿಸಿಕೊಂಡಿದ್ದರು.

ಆ ಬಳಿಕ 30 ವರ್ಷ 307 ದಿನಗಳಾಗಿದ್ದ ವೇಳೆ ಏಕದಿನ ಕ್ರಿಕೆಟ್ನಲ್ಲೂ ಭಾರತದ ಪರ ಆಡಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲೂ 30 ವರ್ಷದ ಬಳಿಕ ಪದಾರ್ಪಣೆ ಮಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡರು.

ಇದೀಗ 32ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಮಾದರಿಯಲ್ಲಿ 30 ವರ್ಷದ ಬಳಿಕ ಪದಾರ್ಪಣೆ ಮಾಡಿದ ಮೊದಲ ಆಟಗಾರ ಎಂಬ ವಿಶೇಷ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.



















