IND vs AUS: ಟೆಸ್ಟ್​ನಲ್ಲಿ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Edited By:

Updated on: Feb 09, 2023 | 8:29 PM

India vs Australia 1st Test: ಮಾಜಿ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರಿಂದ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ಯಾಪ್ ಪಡೆದುಕೊಂಡರು.

1 / 5
ನಾಗ್ಪುರದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಈ ಪಂದ್ಯಕ್ಕೂ ಮುನ್ನ ಮಾಜಿ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರಿಂದ ಸೂರ್ಯ ಟೆಸ್ಟ್ ಕ್ಯಾಪ್ ಪಡೆದುಕೊಂಡರು. ಇದರೊಂದಿಗೆ ವಿಶೇಷ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಪಾಲಾಯಿತು.

2 / 5

ಹೌದು, ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುತ್ತಿರುವುದು ತಮ್ಮ 32ನೇ ವಯಸ್ಸಿನಲ್ಲಿ. ಅಂದರೆ 30 ವರ್ಷದ ಬಳಿಕ ಮೂರು ಮಾದರಿಯಲ್ಲಿ ಟೀಮ್ ಇಂಡಿಯಾ ಪರ ಆಡಿದ ಹೆಗ್ಗಳಿಕೆಯೊಂದು ಸೂರ್ಯನ ಪಾಲಾಗಿದೆ.

3 / 5

ಇದಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ 30 ವರ್ಷ 181 ದಿನಗಳಾಗಿದ್ದ ವೇಳೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​​ನಲ್ಲಿ ಪದಾರ್ಪಣೆ ಮಾಡಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡಿದ ಭಾರತದ ಹಿರಿಯ ಆಟಗಾರ ಎನಿಸಿಕೊಂಡಿದ್ದರು.

4 / 5

ಆ ಬಳಿಕ 30 ವರ್ಷ 307 ದಿನಗಳಾಗಿದ್ದ ವೇಳೆ ಏಕದಿನ ಕ್ರಿಕೆಟ್​ನಲ್ಲೂ ಭಾರತದ ಪರ ಆಡಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲೂ 30 ವರ್ಷದ ಬಳಿಕ ಪದಾರ್ಪಣೆ ಮಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡರು.

5 / 5

ಇದೀಗ 32ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಮಾದರಿಯಲ್ಲಿ 30 ವರ್ಷದ ಬಳಿಕ ಪದಾರ್ಪಣೆ ಮಾಡಿದ ಮೊದಲ ಆಟಗಾರ ಎಂಬ ವಿಶೇಷ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web

TV9 Kannada

Read More
Loading...
Unable to load recommendations.
Follow Us