IND vs AUS T20I Series: ನವೆಂಬರ್ 23ಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ಮತ್ತೊಮ್ಮೆ ಪಂದ್ಯ

India vs Australia, ICC ODI World Cup Final 2023: ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

|

Updated on: Nov 20, 2023 | 9:41 AM

ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಯಿತು.

1 / 7
ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಇನ್ನೆರಡು ದಿನಗಳಲ್ಲಿ ಪುನಃ ಕಾಂಗರೂ ಪಡೆಯ ವಿರುದ್ಧ ಸೆಣೆಸಾಟ ನಡೆಸಲಿದೆ. ನವೆಂಬರ್ 23 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇಲ್ಲಿಂದ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಮತ್ತೊಂದು ರಣತಂತ್ರ ಶುರುವಾಗಲಿದೆ.

2 / 7
ವರದಿಯ ಪ್ರಕಾರ, ಆಸೀಸ್ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗಿದೆ.

3 / 7
ಇದು ಹೊಸ ರೂಪದ ಟೀಮ್ ಇಂಡಿಯಾ ಆಗಿದ್ದು, ಹೆಚ್ಚು ಯುವ ಆಟಗಾರರಿಂದ ಕೂಡಿರುವ ಭಾರತ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಹೀಗಾಗಿ ಬಹಳಷ್ಟು ಆಟಗಾರರು ತಮ್ಮನ್ನು ತಾವು ಸಾಭೀತು ಮಾಡಲು ಅವಕಾಶವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇದೊಂದು ಮಹತ್ವದ ಸರಣಿ.

4 / 7
ಹಾರ್ದಿಕ್ ಪಾಂಡ್ಯ ಈ ಸರಣಿಗೆ ಇಲ್ಲದ ಕಾರಣ ನಾಯಕ ಯಾರು ಎಂಬ ಪ್ರಶ್ನೆ ಕೂಡ ಎದ್ದಿದೆ. ಮೂಲಗಳ ಪ್ರಕಾರ ಸೂರ್ಯಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಿಯಾನ್ ಪರಾಗನ್ ಸ್ಥಾನ ಪಡೆಯಲಿದ್ದಾರಂತೆ.

5 / 7
ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಕ್ರಮವಾಗಿ, ನ. 26 ರಂದು ತಿರುವನಂತಪುರಂ, ನ. 28 ರಂದು ಗುವಾಹಟಿ, ಡಿ. 1 ರಂದು ನಾಗ್ಪುರ ಮತ್ತು ಡಿಸೆಂಬರ್ 3 ರಂದು ಹೈದರಾಬಾದ್​ನಲ್ಲಿ ಆಯೋಜಿಸಲಾಗಿದೆ.

6 / 7
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಿಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

7 / 7
Follow us
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ

ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌

‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ

ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ

ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್

ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ

ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್

ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?

ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು

ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?