- Kannada News Photo gallery Cricket photos IND vs AUS team india 1st team to win the t20i match against australia in bengaluru
IND vs AUS: ಬೆಂಗಳೂರಿನಲ್ಲಿ ಮೊದಲ ಬಾರಿಗೆ ತಲೆ ಬಾಗಿದ ಆಸ್ಟ್ರೇಲಿಯಾ..!
IND vs AUS: ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ 2 ಟಿ20 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2016ರಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್‌ಗಳಿಂದ ಮತ್ತು 2019ರಲ್ಲಿ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.
Updated on: Dec 04, 2023 | 8:50 AM

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಣಿಯ ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ತನ್ನ ಬೌಲರ್‌ಗಳ ಬಲದಿಂದ ಅಲ್ಪ ಮೊತ್ತವನ್ನು ರಕ್ಷಿಸಿ ಆಸ್ಟ್ರೇಲಿಯಾವನ್ನು 6 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 4-1 ಅಂತರದಲ್ಲಿ ವಶಪಡಿಸಿಕೊಂಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 161 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು 154 ರನ್‌ಗಳಿಸಲಷ್ಟೇ ಶಕ್ತವಾಗಿ 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೋತ ಬೇಡದ ದಾಖಲೆಯನ್ನು ಆಸೀಸ್ ತನ್ನ ಖಾತೆಗೆ ಹಾಕಿಕೊಂಡಿತು.

ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ 2 ಟಿ20 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2016ರಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್‌ಗಳಿಂದ ಮತ್ತು 2019ರಲ್ಲಿ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.

ಆದರೆ ಈಗ 2023 ರಲ್ಲಿ ಆಸ್ಟ್ರೇಲಿಯಾ, ಭಾರತದ ವಿರುದ್ಧ 6 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

2019ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ಪಂದ್ಯ ನಡೆದಿತ್ತು. ಆಗ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 190 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತ್ತು.

ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಬಿರುಸಿನ ಇನ್ನಿಂಗ್ಸ್ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರು 113 ರನ್ ಚಚ್ಚಿದ್ದರು. ಇದೀಗ ನಾಲ್ಕು ವರ್ಷಗಳ ಹಿಂದೆ ಅನುಭವಿಸಿದ್ದ ಆ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿ




