23 ವರ್ಷಗಳ ಬಳಿಕ ಮೊದಲ ರನ್​ಗಳಿಸಲು ಪರದಾಡಿದ ಟೀಮ್ ಇಂಡಿಯಾ

Australia vs India, 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ ಪರ್ತ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಈ ಮೂಲಕ 23 ವರ್ಷಗಳ ಬಳಿಕ ಮೊದಲ ರನ್​ಗಳಿಸಲು ಅತ್ಯಧಿಕ ಎಸೆತಗಳನ್ನು ಎದುರಿಸಿದ ಅಪಖ್ಯಾತಿಯನ್ನು ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 23, 2024 | 7:30 AM

ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಟೀಮ್ ಇಂಡಿಯಾ ಬ್ಯಾಟ್ ಮೂಲಕ ಮೊದಲ ರನ್​ಗಳಿಸಲು ಬರೋಬ್ಬರಿ 4 ಓವರ್​ಗಳನ್ನು ತೆಗೆದುಕೊಂಡಿತು. ಇದು 2 ದಶಕಗಳ ಬಳಿಕ ಮೊದಲ ಇನಿಂಗ್ಸ್​ನಲ್ಲಿ ಭಾರತ ತಂಡದ ಅತ್ಯಂತ ಕಳಪೆ ಆರಂಭವಾಗಿದೆ.

2 / 5
ಈ ಪಂದ್ಯದ 4ನೇ ಓವರ್​ನ ಕೊನೆಯ ಎಸೆತದಲ್ಲಿ 3 ರನ್​ಗಳಿಸುವ ಮೂಲಕ ಕೆಎಲ್ ರಾಹುಲ್ ರನ್ ಖಾತೆ ತೆರೆದಿದ್ದರು. ಇದರೊಂದಿಗೆ 23 ವರ್ಷಗಳ ಬಳಿಕ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ ಅತ್ಯಂತ ಕೆಟ್ಟ ಆರಂಭ ಪಡೆದಂತಾಯಿತು.

3 / 5
ಇದಕ್ಕೂ ಮುನ್ನ 2001 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ರನ್​ಗಳಿಸಲು 4 ಓವರ್​ಗಳನ್ನು ತೆಗೆದುಕೊಂಡಿದ್ದರು. ಇದೀಗ ಅದೇ ಆರಂಭವನ್ನು ಪುನರಾವರ್ತಿಸುವ ಮೂಲಕ ಟೀಮ್ ಇಂಡಿಯಾ ಕಳಪೆ ಆರಂಭ ಪಡೆದುಕೊಂಡಿದೆ.

4 / 5
ಈ ಕಳಪೆ ಆರಂಭದೊಂದಿಗೆ ಬ್ಯಾಟಿಂಗ್ ಮುಂದುವರೆಸಿದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 150 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾದ ಸಾಂಘಿಕ ದಾಳಿ ಮುಂದೆ ಮಂಡಿಯೂರಿದ್ದು, ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ 67 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

5 / 5
Follow us