
ಪರ್ತ್ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಟೀಮ್ ಇಂಡಿಯಾ ಬ್ಯಾಟ್ ಮೂಲಕ ಮೊದಲ ರನ್ಗಳಿಸಲು ಬರೋಬ್ಬರಿ 4 ಓವರ್ಗಳನ್ನು ತೆಗೆದುಕೊಂಡಿತು. ಇದು 2 ದಶಕಗಳ ಬಳಿಕ ಮೊದಲ ಇನಿಂಗ್ಸ್ನಲ್ಲಿ ಭಾರತ ತಂಡದ ಅತ್ಯಂತ ಕಳಪೆ ಆರಂಭವಾಗಿದೆ.

ಈ ಪಂದ್ಯದ 4ನೇ ಓವರ್ನ ಕೊನೆಯ ಎಸೆತದಲ್ಲಿ 3 ರನ್ಗಳಿಸುವ ಮೂಲಕ ಕೆಎಲ್ ರಾಹುಲ್ ರನ್ ಖಾತೆ ತೆರೆದಿದ್ದರು. ಇದರೊಂದಿಗೆ 23 ವರ್ಷಗಳ ಬಳಿಕ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ ಅತ್ಯಂತ ಕೆಟ್ಟ ಆರಂಭ ಪಡೆದಂತಾಯಿತು.

ಇದಕ್ಕೂ ಮುನ್ನ 2001 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ರನ್ಗಳಿಸಲು 4 ಓವರ್ಗಳನ್ನು ತೆಗೆದುಕೊಂಡಿದ್ದರು. ಇದೀಗ ಅದೇ ಆರಂಭವನ್ನು ಪುನರಾವರ್ತಿಸುವ ಮೂಲಕ ಟೀಮ್ ಇಂಡಿಯಾ ಕಳಪೆ ಆರಂಭ ಪಡೆದುಕೊಂಡಿದೆ.

ಈ ಕಳಪೆ ಆರಂಭದೊಂದಿಗೆ ಬ್ಯಾಟಿಂಗ್ ಮುಂದುವರೆಸಿದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 150 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾದ ಸಾಂಘಿಕ ದಾಳಿ ಮುಂದೆ ಮಂಡಿಯೂರಿದ್ದು, ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ 67 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.