- Kannada News Photo gallery Cricket photos IND vs AUS team indias 100th win against australia in all formats
IND vs AUS: ಹೀಗೊಂದು ದಾಖಲೆ; ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ಟೀಂ ಇಂಡಿಯಾ..!
IND vs AUS: ದೆಹಲಿ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಎಲ್ಲಾ ಮೂರು ಸ್ವರೂಪಗಳನ್ನು ಒಳಗೊಂಡಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇದು 100 ನೇ ಜಯವಾಗಿದೆ.
Updated on: Feb 20, 2023 | 10:24 AM

ದೆಹಲಿ ಟೆಸ್ಟ್‌ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

India vs Australia 3rd Test When IND vs AUS third Test match of the Border-Gavaskar Trophy check Here

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.



















