Updated on: Feb 20, 2023 | 10:24 AM
ದೆಹಲಿ ಟೆಸ್ಟ್‌ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.
India vs Australia
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.
ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.