IND vs AUS: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ ಹೀಗಿದೆ
IND vs AUS: 2023ರ ಏಷ್ಯಾಕಪ್ ಅನ್ನು ತನ್ನದಾಗಿಸಿಕೊಂಡಿರುವ ಟೀಂ ಇಂಡಿಯಾ, ಇದೀಗ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಸರಣಿ 2023 ರ ವಿಶ್ವಕಪ್‌ನ ಆರಂಭಕ್ಕೂ ಮೊದಲು ಎರಡೂ ತಂಡಗಳಿಗೆ ಅಂತಿಮ ಸಿದ್ಧತೆಗೆ ಸಿಕ್ಕಿರುವ ಅವಕಾಶವಾಗಿದ್ದು, ಸರಣಿ ಗೆಲ್ಲುವ ಮೂಲಕ ವಿಶ್ವಕಪ್‌ಗೆ ಎಂಟ್ರಿಕೊಡಲು ಉಭಯ ತಂಡಗಳು ಕಾದಾಡಲಿವೆ.
1 / 9
2023ರ ಏಷ್ಯಾಕಪ್ ಅನ್ನು ತನ್ನದಾಗಿಸಿಕೊಂಡಿರುವ ಟೀಂ ಇಂಡಿಯಾ, ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಸರಣಿ 2023 ರ ವಿಶ್ವಕಪ್‌ನ ಆರಂಭಕ್ಕೂ ಮೊದಲು ಎರಡೂ ತಂಡಗಳಿಗೆ ಅಂತಿಮ ಸಿದ್ಧತೆಗೆ ಸಿಕ್ಕಿರುವ ಅವಕಾಶವಾಗಿದ್ದು, ಸರಣಿ ಗೆಲ್ಲುವ ಮೂಲಕ ವಿಶ್ವಕಪ್‌ಗೆ ಎಂಟ್ರಿಕೊಡಲು ಉಭಯ ತಂಡಗಳು ಕಾದಾಡಲಿವೆ.
2 / 9
ಭಾರತ ಈಗಾಗಲೇ ವಿಶ್ವಕಪ್ ತಂಡವನ್ನು ಪ್ರಕಟಿಸಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಗಾರರು ತಂಡವನ್ನು ಹೆಸರಿಸಿಲ್ಲ. ಆದರೆ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ತಂಡವೇ ಆಸೀಸ್ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ.
3 / 9
ಇಂಜುರಿಯಿಂದಾಗಿ ಅಕ್ಷರ್ ಪಟೇಲ್ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ಈಗಾಗಲೇ ತಿಳಿಸಿದ್ದಾರೆ. ಹೀಗಾಗಿ ಅಕ್ಷರ್ ಬದಲಿಗೆ ತಂಡದಲ್ಲಿ ಯಾರು ಸ್ಥಾನ ಪಡೆಯಲ್ಲಿದ್ದಾರೆ ಮತ್ತು ಆಸೀಸ್ ವಿರುದ್ಧದ ಸರಣಿಗೆ ಭಾರತ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದಕ್ಕೆ ಉತ್ತರ ಇಲ್ಲಿದೆ.
4 / 9
ಆರಂಭಿಕರು: ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ವಿಶ್ವಕಪ್‌ಗೆ ಮುನ್ನ ಪ್ರಮುಖ ಸರಣಿಯಲ್ಲಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಲು ಇಶಾನ್ ಕಿಶನ್ಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧ ಅಥವಾ ವಿಶ್ವಕಪ್‌ನಲ್ಲಿ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿಲ್ಲ.
5 / 9
ಮಧ್ಯಮ ಕ್ರಮಾಂಕ: ಬೆನ್ನು ನೋವಿನ ಸಮಸ್ಯೆಯಿಂದ ಏಷ್ಯಾಕಪ್‌ನಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ಅಲ್ಲದೆ ಅಯ್ಯರ್ ಏಕದಿನ ತಂಡದ ಪ್ರಮುಖ ಸದಸ್ಯರಾಗಿರುವ ಕಾರಣ ಅವರಿಗೆ ತಂಡದಲ್ಲಿ ಅವಕಾಶ ನೀಡುವುದು ಖಚಿತವಾಗಿದೆ. ಇನ್ನು ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.
6 / 9
ವಿಕೆಟ್‌ಕೀಪರ್‌ಗಳಾದ ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಇಲ್ಲಿ ರಾಹುಲ್ ವಿಕೆಟ್ ಕೀಪರ್ ಆಗಿಯೂ ಕಾಣಿಸಿಕೊಳ್ಳಿದ್ದಾರೆ. ಅಂದರೆ ಅಯ್ಯರ್ 4 ನೇ ಸ್ಥಾನದಲ್ಲಿ ಬ್ಯಾಟ್ ಮಾಡಿದರೆ ಕಿಶನ್ ಬೆಂಚ್ ಕಾಯಬೇಕಾಗಬಹುದು.
7 / 9
ಆಲ್ ರೌಂಡರ್ಸ್: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ತಂಡದಲ್ಲಿರುವ ನಾಲ್ವರು ಆಲ್‌ರೌಂಡರ್‌ಗಳಾಗಿದ್ದಾರೆ. ಆದರೆ ಅಕ್ಷರ್ ಇಂಜುರಿಗೆ ತುತ್ತಾಗಿದ್ದು, ಮೊದಲೆರಡು ಪಂದ್ಯಗಳಲ್ಲಿ ಅವರು ಆಡುವುದಿಲ್ಲ. ಹೀಗಾಗಿ ವಾಷಿಂಗ್ಟನ್ ಸುಂದರ್ಗೆ ತಂಡದಲ್ಲಿ ಸ್ಥಾನ ಸಿಕ್ಕರು ಸಿಗಬಹುದು.
8 / 9
ಬೌಲರ್‌ಗಳು: ಎಂದಿನಂತೆ ಜಸ್ಪ್ರೀತ್ ಬುಮ್ರಾ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ. ಕುಲ್ದೀಪ್ ಯಾದವ್ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದು, 15 ಸದಸ್ಯರ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗಿದೆ.
9 / 9
ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.