IND vs AUS: ಟೀಮ್ ಇಂಡಿಯಾಗೆ ಮತ್ತೆ ‘ಹೆಡ್’ಏಕ್

Updated on: Dec 19, 2024 | 11:55 AM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಅಲಭ್ಯರಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ಬ್ರಿಸ್ಬೇನ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಹೆಡ್ ಗಾಯಗೊಂಡಿದ್ದು, ಹೀಗಾಗಿ 4ನೇ ಪಂದ್ಯಕ್ಕೆ ಅನುಮಾನ ಎನ್ನಲಾಗಿತ್ತು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಅಲಭ್ಯರಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ಬ್ರಿಸ್ಬೇನ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಹೆಡ್ ಗಾಯಗೊಂಡಿದ್ದು, ಹೀಗಾಗಿ 4ನೇ ಪಂದ್ಯಕ್ಕೆ ಅನುಮಾನ ಎನ್ನಲಾಗಿತ್ತು.

2 / 6

ಆದರೀಗ ಟ್ರಾವಿಸ್ ಹೆಡ್ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನನ್ನ ಗಾಯವು ಗಂಭೀರವಲ್ಲ. ಕಾಲಿನಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡಿದೆ ಅಷ್ಟೇ. ಅದು ಮುಂಬರುವ ಟೆಸ್ಟ್ ಪಂದ್ಯದ ವೇಳೆಗೆ ಸಂಪೂರ್ಣ ಗುಣವಾಗಲಿದೆ ಎಂದು ಹೆಡ್ ತಿಳಿಸಿದ್ದಾರೆ.

3 / 6

ಅತ್ತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಕೂಡ ಟ್ರಾವಿಸ್ ಹೆಡ್ ಅವರ ಗಾಯವು ಗಂಭೀರವಲ್ಲ ಎಂದು ಖಚಿತಪಡಿಸಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಹೆಚ್ಚು ಹೊತ್ತು ಕ್ರೀಸ್​ನಲ್ಲಿದ್ದ ಕಾರಣ ಅವರ ಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಇದಾಗ್ಯೂ ಅವರು ಬಾಕ್ಸಿಂಗ್ ಡೇ ಟೆಸ್ಟ್​ಗೆ ಲಭ್ಯರಿರಲಿದ್ದಾರೆ ಎಂದು ತಿಳಿಸಿದ್ದಾರೆ.

4 / 6

ಮೆಲ್ಬೋರ್ನ್ ಟೆಸ್ಟ್ ಪಂದ್ಯದ ವೇಳೆಗೆ ನಾನು ಸಂಪೂರ್ಣ ಫಿಟ್ ಆಗಲಿದ್ದೇನೆ. ಅದರಂತೆ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಭಾರತದ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ ಎಂದು ಟ್ರಾವಿಸ್ ಹೆಡ್ ಹೇಳಿದ್ದಾರೆ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲೂ ಹೆಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

5 / 6

ಇತ್ತ ನಾಲ್ಕನೇ ಪಂದ್ಯಕ್ಕೆ ಹೆಡ್ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಯೊಂದಿಗೆ ತುಸು ನಿಟ್ಟುಸಿರು ಬಿಟ್ಟಿದ್ದ ಟೀಮ್ ಇಂಡಿಯಾಗೆ, ಮತ್ತೆ ಹೆಡ್​ಗಾಗಿ ರಣತಂತ್ರ ರೂಪಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಏಕೆಂದರೆ ಟ್ರಾವಿಸ್ ಹೆಡ್ ಟೀಮ್ ಇಂಡಿಯಾ ವಿರುದ್ಧ ಆಡಿದ ಪ್ರಮುಖ ಪಂದ್ಯಗಳಲ್ಲಿ ಶತಕಗಳ ಮೇಲೆ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

6 / 6

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 137 ರನ್ ಬಾರಿಸಿ ಶುರು ಮಾಡಿದ ಸಿಡಿಲಬ್ಬರ,​ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (163 ರನ್) ಪಂದ್ಯದಲ್ಲೂ ಮುಂದುವರೆದಿತ್ತು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಮತ್ತು 3ನೇ ಟೆಸ್ಟ್​ನಲ್ಲಿ ಕ್ರಮವಾಗಿ 140 ಹಾಗೂ 152 ರನ್​​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಾಲಿಗೆ ಹೆಡ್ ನಿಜವಾದ ತಲೆನೋವಾಗಿ ಪರಿಣಮಿಸಿದ್ದಾರೆ.

Published On - 11:54 am, Thu, 19 December 24

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us