ಟೀಮ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಶರವೇಗದ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

| Updated By: ಝಾಹಿರ್ ಯೂಸುಫ್

Updated on: Dec 15, 2024 | 10:24 AM

Australia vs India, 3rd Test: ಬ್ರಿಸ್ಬೇನ್​ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

1 / 6
ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲೂ ಟ್ರಾವಿಸ್ ಹೆಡ್ ಶತಕ ಸಿಡಿಸಿದ್ದಾರೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಡ್ 115 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಭಾರತದ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ.

2 / 6
ಇದಕ್ಕೂ ಮುನ್ನ ಅಡಿಲೇಡ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಸ್ಪೋಟಕ ಶತಕ ಬಾರಿಸಿದ್ದರು. ಆ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಹೆಡ್ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​​ಗಳೊಂದಿಗೆ ಕೇವಲ 111 ಎಸೆತಗಳಲ್ಲಿ ಶತಕ ಪೂರೈಸಿದ್ದರು.

3 / 6
ಇದೀಗ ಬ್ರಿಸ್ಬೇನ್​ನಲ್ಲೂ ಹೆಡ್ ಅಬ್ಬರ ಮುಂದುವರೆದಿದೆ. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಹೆಡ್ ಬ್ಯಾಟ್​ನಿಂದ 12 ಆಕರ್ಷಕ ಫೋರ್​​ಗಳು ಮೂಡಿಬಂದಿವೆ.

4 / 6
ಈ ಬಿರುಸಿನ ಬ್ಯಾಟಿಂಗ್​​ನೊಂದಿಗೆ ಹೆಡ್ ಟೆಸ್ಟ್​ ಕ್ರಿಕೆಟ್​ನಲ್ಲಿ 9 ಶತಕ ಪೂರೈಸಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ಅಂದಹಾಗೆ ಇದು ಭಾರತದ ವಿರುದ್ಧ ಟ್ರಾವಿಸ್ ಹೆಡ್ ಅವರ ಮೂರನೇ ಶತಕ.

5 / 6
ಇದಕ್ಕೂ ಮುನ್ನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಲಂಡನ್​​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಹೆಡ್ 174 ಎಸೆತಗಳಲ್ಲಿ 163 ರನ್ ಚಚ್ಚಿದ್ದರು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಸತತ ಎರಡು ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

6 / 6
ಇನ್ನು ಟ್ರಾವಿಸ್ ಹೆಡ್ ಅವರ ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 69 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಟ್ರಾವಿಸ್ ಹೆಡ್ (102) ಹಾಗೂ ಸ್ಟೀವ್ ಸ್ಮಿತ್ (62) ಬ್ಯಾಟಿಂಗ್ ಬ್ಯಾಟಿಂಗ್ ಮಾಡುತ್ತಿದ್ದಾರೆ.