ವಿರಾಟ್ ಕೊಹ್ಲಿಯನ್ನು ಕೋಡಂಗಿ ಎಂದ ಆಸ್ಟ್ರೇಲಿಯಾ ಮಾಧ್ಯಮ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿಯನ್ನು ಸೂಪರ್ ಸ್ಟಾರ್ ಎಂದು ವರ್ಣಿಸಿದ್ದ ಆಸ್ಟ್ರೇಲಿಯಾ ಮಾಧ್ಯಮಗಳು ಇದೀಗ ಟೀಮ್ ಇಂಡಿಯಾ ಆಟಗಾರನಿಗೆ ಜೋಕರ್ ಪಟ್ಟ ಕಟ್ಟಿದೆ. ಇದಕ್ಕೆ ಮುಖ್ಯ ಕಾರಣ 19 ವರ್ಷದ ಸ್ಯಾಮ್ ಕೊನ್​ಸ್ಟಾಸ್ ಜೊತೆ ಅತಿರೇಕದಿಂದ ವರ್ತಿಸಿರುವುದು. ಇದನ್ನೇ ಈಗ ಆಸ್ಟ್ರೇಲಿಯಾ ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಿದೆ.

ಝಾಹಿರ್ ಯೂಸುಫ್
|

Updated on: Dec 28, 2024 | 7:15 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಡಿಸೆಂಬರ್ 26 ರಿಂದ ಶುರುವಾದ ಈ ಪಂದ್ಯದ ಮೊದಲ ದಿನದಾಟವು ವಿರಾಟ್ ಕೊಹ್ಲಿಯ ಆಕ್ರಮಣಕಾರಿ ವರ್ತನೆಗೆ ಸಾಕ್ಷಿಯಾಗಿತ್ತು. ಇದರ ಬೆನ್ನಲ್ಲೇ ಕೊಹ್ಲಿ ವಿರುದ್ಧ ಆಸ್ಟ್ರೇಲಿಯಾ ಮಾಧ್ಯಮಗಳು ತಿರುಗಿ ಬಿದ್ದಿವೆ.

1 / 5
ಇದಕ್ಕೆ ಮುಖ್ಯ ಕಾರಣ ಮೊದಲ ದಿನದಾಟದಲ್ಲಿ ವಿರಾಟ್ ಕೊಹ್ಲಿ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಟಾರ್ಗೆಟ್ ಮಾಡಿರುವುದು. ಆಸ್ಟ್ರೇಲಿಯಾ ಇನಿಂಗ್ಸ್ ವೇಳೆ ಕೊಹ್ಲಿ 19 ವರ್ಷದ ಸ್ಯಾಮ್ ಅವರನ್ನು ಭುಜದಿಂದ ಗುದ್ದಿ ಕೆಣಕಿದ್ದರು. ವಿರಾಟ್ ಕೊಹ್ಲಿಯ ಈ ವರ್ತನೆಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರು ಸೇರಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೇ ಈಗ ಆಸ್ಟ್ರೇಲಿಯಾ ಮಾಧ್ಯಮಗಳು ಮುಖ್ಯ ಸುದ್ದಿಯಾಗಿ ಮಾಡಿಕೊಂಡಿದೆ.

2 / 5
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯನ್ನು ಸೂಪರ್ ಸ್ಟಾರ್, ಕೊಹ್ಲಿವುಡ್ ಎಂದೆಲ್ಲಾ ವರ್ಣಿಸಿದ್ದ ಆಸ್ಟ್ರೇಲಿಯಾ ಮಾಧ್ಯಮಗಳು ಇದೀಗ ಟೀಮ್ ಇಂಡಿಯಾ ಆಟಗಾರರನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಬಿಂಬಿಸಲಾರಂಭಿಸಿದೆ. ಅದರಲ್ಲೂ 'ದಿ ವೆಸ್ಟ್ ಆಸ್ಟ್ರೇಲಿಯನ್' ಪತ್ರಿಕೆಯು ಕೊಹ್ಲಿಯನ್ನು ಕೋಡಂಗಿ (ಜೋಕರ್) ಎಂಬ ಶೀರ್ಷಿಕೆಯೊಂದಿಗೆ ಟೀಕಿಸಿದೆ.

3 / 5
ಇದೀಗ ದಿ ವೆಸ್ಟ್ ಆಸ್ಟ್ರೇಲಿಯನ್ ಪತ್ರಿಕೆಯ ಕ್ಲೌನ್ ಕೊಹ್ಲಿ ಮುಖಪುಟವು ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ಅಭಿಮಾನಿಗಳಿಂದ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇನ್ನು ಈ ವರ್ತನೆಗಾಗಿ ವಿರಾಟ್ ಕೊಹ್ಲಿಗೆ ಐಸಿಸಿ ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದ್ದು, ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 474 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ದ್ವಿತೀಯ ದಿನದಾಟದ ಭೋಜನಾ ವಿರಾಮದ ವೇಳೆಗೆ 7 ವಿಕೆಟ್ ಕಳೆದುಕೊಂಡು 244 ರನ್ ಕಲೆಹಾಕಿದೆ.

5 / 5
Follow us
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ