AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ಭರ್ಜರಿ ಸೆಂಚುರಿಗೆ ಹಲವು ದಾಖಲೆಗಳು ಉಡೀಸ್

Virat Kohli Records: ಪರ್ತ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 30 ಶತಕಗಳನ್ನು ಬಾರಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಮೈಲುಗಲ್ಲು ಮುಟ್ಟಿದ ಭಾರತದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 25, 2024 | 7:55 AM

Share
ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 143 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 100 ರನ್ ಬಾರಿಸಿದರು.

1 / 6
ಈ ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

2 / 6
ಅತ್ಯಧಿಕ ಶತಕ: ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 6 ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 7ನೇ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

3 / 6
ಶತಕ ವೀರ: ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಜಾಕ್ ಹಾಬ್ಸ್​ (9) ಹೆಸರಿನಲ್ಲಿತ್ತು. ಇದೀಗ ಆಸ್ಟ್ರೇಲಿಯಾದಲ್ಲಿ 10ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 6
ಒಪ್ಟಸ್​ ಕಿಂಗ್: ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಈ ಮೈದಾನದಲ್ಲಿ ಎರಡನೇ ಸೆಂಚುರಿ ಪೂರೈಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

5 / 6
ಶತಕಗಳ ಸರದಾರ: ಈ ಭರ್ಜರಿ ಸೆಂಚುರಿಯೊಂದಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (51), ರಾಹುಲ್ ದ್ರಾವಿಡ್ (36) ಮತ್ತು ಸುನಿಲ್ ಗವಾಸ್ಕರ್ (34) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.

6 / 6
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು

ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ