- Kannada News Photo gallery Cricket photos IND vs AUS: Washington Sundar set to play in 2nd Test at Adelaide
IND vs AUS: ಜಡೇಜಾ, ಅಶ್ವಿನ್ಗೆ ನೋ ಚಾನ್ಸ್: ಪಿಂಕ್ ಬಾಲ್ ಟೆಸ್ಟ್ನಲ್ಲಿ ಏಕೈಕ ಸ್ಪಿನ್ನರ್
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್ನಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿರುವುದು ವಿಶೇಷ. ಹೀಗಾಗಿಯೇ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ.
Updated on: Dec 04, 2024 | 9:30 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ. ಬದಲಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲಾಗಿತ್ತು.

ಇದೀಗ ಇದೇ ಜೋಡಿಯನ್ನು ಮುಂದುವರೆಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರಿಗೆ ಚಾನ್ಸ್ ನೀಡಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಬಯಸಿದ್ದಾರೆ.

ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲೂ ಭಾರತ ಪರ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದ ಸುಂದರ್ ಬ್ಯಾಟ್ ಮೂಲಕ 33 ರನ್ಗಳ ಕೊಡುಗೆ ನೀಡಿದ್ದರು. ಅಲ್ಲದೆ ಪ್ರೈಮ್ ಮಿನಿಸ್ಟರ್ಸ್ ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲೂ ಸುಂದರ್ 42 ರನ್ಗಳನ್ನು ಬಾರಿಸಿದ್ದಾರೆ.

ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್ನಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಮುಂದುವರೆಸಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಎರಡು ಬದಲಾವಣೆ ಕಂಡು ಬರುವುದು ಖಚಿತ.

ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದ ಪರ್ತ್ ಟೆಸ್ಟ್ ಪಂದ್ಯವಾಡಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಆಡುವ ಬಳಗದಿಂದ ಹೊರಬೀಳುವುದು ಖಚಿತ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಧ್ರುವ ಜುರೆಲ್ , ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.
