IND vs AUS: ಜಡೇಜಾ, ಅಶ್ವಿನ್​ಗೆ ನೋ ಚಾನ್ಸ್: ಪಿಂಕ್ ಬಾಲ್​​ ಟೆಸ್ಟ್​ನಲ್ಲಿ ಏಕೈಕ ಸ್ಪಿನ್ನರ್

|

Updated on: Dec 04, 2024 | 9:30 AM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್​ನಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿರುವುದು ವಿಶೇಷ. ಹೀಗಾಗಿಯೇ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ.

1 / 7
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್​​ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

2 / 7
ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​​ನಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ. ಬದಲಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲಾಗಿತ್ತು.

3 / 7
ಇದೀಗ ಇದೇ ಜೋಡಿಯನ್ನು ಮುಂದುವರೆಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರಿಗೆ ಚಾನ್ಸ್ ನೀಡಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಬಯಸಿದ್ದಾರೆ.

4 / 7
ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲೂ ಭಾರತ ಪರ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದ ಸುಂದರ್ ಬ್ಯಾಟ್ ಮೂಲಕ 33 ರನ್​​ಗಳ ಕೊಡುಗೆ ನೀಡಿದ್ದರು. ಅಲ್ಲದೆ ಪ್ರೈಮ್ ಮಿನಿಸ್ಟರ್ಸ್​ ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲೂ ಸುಂದರ್ 42 ರನ್​​ಗಳನ್ನು ಬಾರಿಸಿದ್ದಾರೆ.

5 / 7
ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್​​ನಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಮುಂದುವರೆಸಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಪಿಂಕ್ ಬಾಲ್ ಟೆಸ್ಟ್​ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಎರಡು ಬದಲಾವಣೆ ಕಂಡು ಬರುವುದು ಖಚಿತ.

6 / 7
ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದ ಪರ್ತ್​ ಟೆಸ್ಟ್ ಪಂದ್ಯವಾಡಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಆಡುವ ಬಳಗದಿಂದ ಹೊರಬೀಳುವುದು ಖಚಿತ.  ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

7 / 7
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಧ್ರುವ ಜುರೆಲ್ , ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್​​ಪ್ರೀತ್  ಬುಮ್ರಾ , ಮೊಹಮ್ಮದ್ ಸಿರಾಜ್.