- Kannada News Photo gallery Cricket photos IND vs AUS What time does the World Test Championship final start in India?, Live broadcast in which channel?
WTC Final 2023 Live Streaming: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಭಾರತದಲ್ಲಿ ಎಷ್ಟು ಗಂಟೆಗೆ ಶುರು?, ನೇರ ಪ್ರಸಾರ ಯಾವುದರಲ್ಲಿ?
IND vs AUS Fianl: ಜೂನ್ 7 ರಿಂದ 11ರ ವರೆಗೆ ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಡೆಯಲಿದೆ. ಈ ಐತಿಹಾಸಿಕ ಕಾದಾಟ ಎಷ್ಟು ಗಂಟೆಗೆ ಆರಂಭವಾಗಲಿದೆ?, ನೇರ ಪ್ರಸಾರ ಯಾವುದರಲ್ಲಿ?. ಇಲ್ಲಿದೆ ಮಾಹಿತಿ.
Updated on: Jun 02, 2023 | 7:33 AM

ಭಾರತ ಕ್ರಿಕೆಟ್ ತಂಡ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ಗೆ (WTC Final 2023) ತಯಾರಿ ನಡೆಸುತ್ತಿದೆ. ಜೂನ್ 7ಕ್ಕೆ ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಎದುರು ಮುಗ್ಗರಿಸಿತ್ತು. ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ.

ಇನ್ನು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಟೆಲಿವಿಷನ್ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಲಭ್ಯವಾಗಲಿದೆ.

ಐಸಿಸಿಐ ಅಧಿಕೃತ ವೆಬ್‌ಸೈಟ್‌ನಲ್ಲೂ ನೇರ ಪ್ರಸಾರ ಪಡೆಯಬಹುದಾಗಿದೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ನೇರ ಪ್ರಸಾರ ಲಭ್ಯವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಹಾನೆ, ಪೂಜಾರ ಸೇರಿದಂತೆ ಭಾರತದ ಎಲ್ಲ ಆಟಗಾರರು ಲಂಡನ್ನ ಅರುಂಡೆಲ್ ಕ್ಯಾಸಲ್ ಕ್ರಿಕೆಟ್ ಕ್ಲಬ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಹೊಸ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದಾರೆ.

ಜೂನ್ 7 ರಿಂದ 11ರ ವರೆಗೆ ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಐತಿಹಾಸಿಕ ಕಾದಾಟಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಕೂಡ ಪ್ರಕಟ ಮಾಡಿದೆ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್‌ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್ ಮತ್ತು ಇಶಾನ್ ಕಿಶನ್.

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕೇರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜಾಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜಾಶ್ ಇಂಗ್ಲಿಸ್ (ವಿಕೆಟ್‌ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ನೇಥನ್ ಲಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಮತ್ತು ಡೇವಿಡ್ ವಾರ್ನರ್.



















