AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, WTC Final: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯದ ದ್ವಿತೀಯ ದಿನದಾಟ ಹೇಗಿತ್ತು?: ಇಲ್ಲಿದೆ ನೋಡಿ ಫೋಟೋ

India vs Australia Final: ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.

Vinay Bhat
|

Updated on: Jun 09, 2023 | 10:14 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೋಚಕತೆ ಸೃಷ್ಟಿಸಿದೆ.

1 / 8
ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.

2 / 8
ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

3 / 8
ಬೃಹತ್ ಮೊತ್ತ ಗಳಿಸುವ ಗುರಿಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. 146 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು.

4 / 8
ಅಂತಿಮವಾಗಿ ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.

5 / 8
ಭಾರತ ಪರ ನಾಯಕ ರೋಹಿತ್​ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಮೊದಲ ಇನ್ನಿಂಗ್ಸ್​ ಆರಂಭಿಸಿದರು. ಆದರೆ, ಇಬ್ಬರೂ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ನಾಯಕ ರೋಹಿತ್ ಕೇವಲ 15 ರನ್​ಗಳಿಗೆ ಪ್ಯಾಟ್ ಕಮ್ಮಿನ್ಸ್ ಎಸತೆದಲ್ಲಿ ಎಲ್​ಬಿ ಬಲೆಗೆ ಬಿದ್ದರೆ ಗಿಲ್ ಆಟ 13 ರನ್​ಗಳಿಗೆ ಅಂತ್ಯವಾಯಿತು.

6 / 8
ಬಳಿಕ ಕ್ರೀಸ್​ಗೆ ಬಂದ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು.

7 / 8
ಜಡೇಜಾ 51 ಬಾಲ್​ಗಳಲ್ಲಿ 7 ಬೌಂಡರಿ ಮತ್ತು ಸಿಕ್ಸರ್​ ಸಮೇತ 48 ರನ್​ಗೆ ನಿರ್ಗಮಿಸಿದರು. 29 ರನ್​ ಗಳಿಸಿರುವ ರಹಾನೆ ಹಾಗೂ 5 ರನ್​ ಗಳಿಸಿರುವ ಶ್ರೀಕರ್ ಭರತ್ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದ್ದು 318 ರನ್​ಗಳ ಹಿನ್ನಡೆಯಲ್ಲಿದೆ.

8 / 8
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ