IND vs AUS: ಸೋಲಿನ ನಡುವೆಯೂ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮೆಲ್ಬೋರ್ನ್ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಬರೆದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
1 / 5
ಮೆಲ್ಬೋರ್ನ್ನ ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 207 ಎಸೆತಗಳಲ್ಲಿ 84 ರನ್ ಬಾರಿಸಿದರು.
2 / 5
ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ 118 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 82 ರನ್ ಬಾರಿಸಿದ್ದರು. ಈ ಮೂಲಕ ಮೆಲ್ಬೋರ್ನ್ ಪಿಚ್ನ ಎರಡೂ ಇನಿಂಗ್ಸ್ಗಳಲ್ಲೂ 50+ ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಂಡರು.
3 / 5
ಈ ಹಿಂದೆ ಸಚಿನ್ ತೆಂಡೂಲ್ಕರ್ (1999) ಹಾಗೂ ವಿರಾಟ್ ಕೊಹ್ಲಿ (2014) ಇದೇ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ 50+ ರನ್ಗಳಿಸಿ ವಿಶೇಷ ದಾಖಲೆ ಬರೆದಿದ್ದರು. ಇದೀಗ 10 ವರ್ಷಗಳ ಬಳಿಕ ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಪುನರಾವರ್ತಿಸಿದ್ದಾರೆ.
4 / 5
ಇನ್ನು ಈ ಅರ್ಧಶತಕದೊಂದಿಗೆ ಈ ವರ್ಷ ಟೆಸ್ಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ವರ್ಷ 15 ಟೆಸ್ಟ್ ಪಂದ್ಯಗಳಲ್ಲಿ 29 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 1478 ರನ್ ಕಲೆಹಾಕಿದ್ದಾರೆ. ಈ ಮೂಲಕ 2024 ರಲ್ಲಿ ಟೆಸ್ಟ್ನಲ್ಲಿ ಅತೀ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್. ಈ ವರ್ಷ 17 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 31 ಇನಿಂಗ್ಸ್ಗಳ ಮೂಲಕ 1556 ರನ್ ಕಲೆಹಾಕಿದ್ದಾರೆ. ಈ ಮೂಲಕ 2024 ರಲ್ಲಿ ಟೆಸ್ಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.