AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಬರೆದ ಸೂರ್ಯ

Suryakumar Yadav: ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ತಮ್ಮ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

ಪೃಥ್ವಿಶಂಕರ
|

Updated on: Oct 07, 2024 | 4:40 PM

Share
ಭಾರತ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 29 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

1 / 6
ತಮ್ಮ ಈ ಸ್ಫೋಟಕ ಇನ್ನಿಂಗ್ಸ್ ಕೇವಲ 14 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 2 ಬೌಂಡರಿ ಹಾಗೂ 3 ಸಿಕ್ಸರ್​ಗಳನ್ನು ಸಹ ಸಿಡಿಸಿದರು. ಇದರೊಂದಿಗೆ ಅವರು ತಮ್ಮ ಹೆಸರಿನಲ್ಲಿ ಎರಡು ವಿಶೇಷ ದಾಖಲೆಗಳನ್ನು ಸೃಷ್ಟಿಸಿದರು.

2 / 6
ಬಾಂಗ್ಲಾದೇಶ ವಿರುದ್ಧ 29 ರನ್​ಗಳ ಇನ್ನಿಂಗ್ಸ್ ಆಡಿದ ಸೂರ್ಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 15ನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ಸೂರ್ಯ, ಇದೀಗ ಮೂರು ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದುಕೊಂಡಿದ್ದಾರೆ.

3 / 6
ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದ ಸೂರ್ಯ ಟಿ20ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಇದುವರೆಗೆ ಟಿ20 ಯಲ್ಲಿ ಒಟ್ಟು 139 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಮತ್ತು ವರುಣ್ ತಲಾ 3 ವಿಕೆಟ್ ಪಡೆದರು.

5 / 6
ಬಾಂಗ್ಲಾದೇಶ ನೀಡಿದ 128 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 11.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಸಾಧಿಸಿತು. ತಂಡದ ಪರ ಹಾರ್ದಿಕ್ ಪಾಂಡ್ಯ ಅತ್ಯಧಿಕ 39 ರನ್​ಗಳ ಇನ್ನಿಂಗ್ಸ್ ಆಡಿದರೆ, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಲಾ 29 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಸಹಕರಿಸಿದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ