AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾ ವಿರುದ್ಧ 4 ವಿಕೆಟ್ ಪಡೆದು ಇತಿಹಾಸ ಬರೆದ ಬುಮ್ರಾ

Jasprit Bumrah: ಬಾಂಗ್ಲಾದೇಶ ವಿರುದ್ಧ ಮೊದಲ ಇನ್ನಿಂಗ್ಸ್​ನಲ್ಲಿ 11 ಓವರ್ ಬೌಲ್ ಮಾಡಿದ ಬುಮ್ರಾ 50 ರನ್ ನೀಡಿ 4 ವಿಕೆಟ್ ಪಡೆದರು. ಇದರೊಂದಿಗೆ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 400 ವಿಕೆಟ್ ಪೂರೈಸಿದ ಭಾರತದ 10ನೇ ಹಾಗೂ ಐದನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Sep 20, 2024 | 4:29 PM

Share
ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 149 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
ಬಾಂಗ್ಲಾದೇಶ ವಿರುದ್ಧ ಮೊದಲ ಇನ್ನಿಂಗ್ಸ್​ನಲ್ಲಿ 11 ಓವರ್ ಬೌಲ್ ಮಾಡಿದ ಬುಮ್ರಾ 50 ರನ್ ನೀಡಿ 4 ವಿಕೆಟ್ ಪಡೆದರು. ಇದರೊಂದಿಗೆ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 400 ವಿಕೆಟ್ ಪೂರೈಸಿದ ಭಾರತದ 10ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 6
ಟೀಂ ಇಂಡಿಯಾದಲ್ಲಿ ಪ್ರಸ್ತುತ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸುತ್ತಿರುವ ಬುಮ್ರಾ, ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದಾರೆ. ಹೀಗಾಗಿ ತಂಡದ ಪರ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಕಾಣಿಸಿಕೊಂಡಿರುವ ಯಾರ್ಕರ್ ಕಿಂಗ್ ಇದುವರೆಗೆ ಟೀಂ ಇಂಡಿಯಾ ಪರ ಎಲ್ಲಾ ಮೂರು ಮಾದರಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

3 / 6
ಭಾರತ ಪರ ಇದುವರೆಗೆ 70 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಬುಮ್ರಾ 89 ವಿಕೆಟ್ ಪಡೆದಿದ್ದರೆ, 36 ಟೆಸ್ಟ್ ಪಂದ್ಯಗಳಲ್ಲಿ 162 ವಿಕೆಟ್ ಹಾಗೂ 89 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 149 ವಿಕೆಟ್ ಪಡೆದಿದ್ದಾರೆ. ಒಟ್ಟಾರೆ, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್‌ಗಳನ್ನು ಪೂರೈಸಿರುವ ಬುಮ್ರಾ ದಿಗ್ಗಜರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

4 / 6
ಇನ್ನು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಕಬಳಿಸಿದವರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ಜಂಬೂ ಖ್ಯಾತಿಯ ಕುಂಬ್ಳೆ ಒಟ್ಟಾರೆಯಾಗಿ ಆಡಿರುವ 499 ಇನ್ನಿಂಗ್ಸ್‌ಗಳಲ್ಲಿ 953 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 6
ಎರಡನೇ ಸ್ಥಾನದಲ್ಲಿರುವ ಆರ್ ಅಶ್ವಿನ್ 369 ಇನ್ನಿಂಗ್ಸ್‌ಗಳಲ್ಲಿ 744 ವಿಕೆಟ್ ಪಡೆದಿದ್ದರೆ, ಹರ್ಭಜನ್ ಸಿಂಗ್ 707 ವಿಕೆಟ್ ಉರುಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಕಪಿಲ್ ದೇವ್ ಅವರು 448 ಇನ್ನಿಂಗ್ಸ್‌ಗಳಲ್ಲಿ 687 ವಿಕೆಟ್ ಪಡೆದಿದ್ದಾರೆ. ಜಹೀರ್ ಖಾನ್ 373 ಇನ್ನಿಂಗ್ಸ್‌ಗಳಲ್ಲಿ 597 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ