IND vs BAN: ಟಾಪ್ ಆರ್ಡರ್ ಫಿಕ್ಸ್, ಕೀಪರ್ ಯಾರು? ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು? ಇಲ್ಲಿದೆ ಸಂಭಾವ್ಯ ತಂಡ

IND vs BAN: ರೋಹಿತ್ ನಾಯಕತ್ವದಲ್ಲಿ ತಂಡವು ಟೆಸ್ಟ್ ಸರಣಿಯನ್ನು ಗೆಲ್ಲವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಇನ್ನು ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 09, 2024 | 6:13 PM

ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವೆ ಸೆಪ್ಟೆಂಬರ್ 19 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಎರಡನೇ ಟೆಸ್ಟ್‌ಗೆ ಭಾರತ ತಂಡವನ್ನು ಆ ನಂತರ ಪ್ರಕಟಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

1 / 6
16 ಸದಸ್ಯರ ಭಾರತ ತಂಡದಲ್ಲಿ ಯುವ ಆಟಗಾರರಾದ ಆಕಾಶದೀಪ್ ಮತ್ತು ಯಶ್ ದಯಾಳ್ ಸ್ಥಾನ ಪಡೆದಿದ್ದಾರೆ. ರಿಷಬ್ ಪಂತ್ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ರೋಹಿತ್ ನಾಯಕತ್ವದಲ್ಲಿ, ತಂಡವು ಟೆಸ್ಟ್ ಸರಣಿಯನ್ನು ಗೆಲ್ಲವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಇನ್ನು ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡುವುದಾದರೆ..

2 / 6
ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಓಪನಿಂಗ್‌ನಲ್ಲಿ ಬಲ-ಎಡಗೈ ಸಂಯೋಜನೆ ಇರಬೇಕು ಎಂಬುದು ಗಂಭೀರ್ ಅವರ ತಂತ್ರ ಕೂಡ ಆಗಿರುವುದರಿಂದ ಈ ಇಬ್ಬರೇ ಆರಂಭಿರಾಗಿರಬಹುದು. ಉಳಿದಂತೆ ಮೂರನೇ ಸ್ಥಾನದಲ್ಲಿ ಶುಭ್‌ಮನ್ ಗಿಲ್ ಹಾಗೂ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

3 / 6
ಬಹಳ ದಿನಗಳ ನಂತರ ಟೀಂ ಇಂಡಿಯಾಕ್ಕೆ ಮರಳಿರುವ ವಿಕೆಟ್ ಕೀಪರ್ ರಿಷಬ್ ಪಂತ್ ಐದನೇ ಸ್ಥಾನದಲ್ಲಿ ಆಡುವುದನ್ನು ಕಾಣಬಹುದಾಗಿದೆ. ಆರನೇ ಸ್ಥಾನಕ್ಕಾಗಿ ಕೆಎಲ್ ರಾಹುಲ್ ಮತ್ತು ಸರ್ಫರಾಜ್ ಖಾನ್ ನಡುವೆ ಪೈಪೋಟಿ ಇದೆ. ಆದರೆ ಅನುಭವದ ಆಧಾರದ ಮೇಲೆ ಕೆಎಲ್ ರಾಹುಲ್ ಸ್ಥಾನ ಪಡೆಯಬಹುದು.

4 / 6
ಈ ಬಳಿಕ ಆಲ್ ರೌಂಡರ್​ಗಳ ಸರಣಿ ಆರಂಭವಾಗಲಿದ್ದು, ರವೀಂದ್ರ ಜಡೇಜಾ ಏಳನೇ ಸ್ಥಾನ, ಅಕ್ಷರ್ ಪಟೇಲ್ ಎಂಟನೇ ಸ್ಥಾನ, ರವಿಚಂದ್ರನ್ ಅಶ್ವಿನ್ ಒಂಬತ್ತನೇ ಸ್ಥಾನ, ಜಸ್ಪ್ರೀತ್ ಬುಮ್ರಾ ಹತ್ತನೇ ಮತ್ತು ಮೊಹಮ್ಮದ್ ಸಿರಾಜ್ 11 ನೇ ಸ್ಥಾನದಲ್ಲಿ ಆಡುವುದನ್ನು ಕಾಣಬಹುದಾಗಿದೆ.

5 / 6
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 6
Follow us