
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಈಗಾಗಲೇ ಚಿತ್ತಗಾಂಗ್ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

ವಿರಾಟ್ ಕೊಹ್ಲಿ ಕೂಡ ನೆಟ್ನಲ್ಲಿ ಬೆವರು ಹರಿಸಿದರು.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.
Published On - 8:57 am, Tue, 13 December 22